ಸಾರಾಂಶ
ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಮಹಮ್ಮದ್ ಶಬೀಉಲ್ಲಾ, ನಯಾಜ್, ಸಮೀಉಲ್ಲಾ ಶೇಕ್ ಮುಕ್ತಿಯಾರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಚನ್ನಗಿರಿ: ತಾಲೂಕಿನ ದೇವರಹಳ್ಳಿ ಗ್ರಾಮದ ಮನೆಯಲ್ಲಿ ಕಳ್ಳತನ ಮತ್ತು ಮುದ್ದೇನಹಳ್ಳಿ, ಪಾಂಡೋಮಟ್ಟಿ ಗ್ರಾಮಗಳಲ್ಲಿ ₹2.20 ಲಕ್ಷ ಬೆಲೆಬಾಳುವ ನಾಲ್ಕುವರೆ ಕ್ವಿಂಟಲ್ ಅಡಕೆ, ದೇವರಹಳ್ಳಿ ಗ್ರಾಮದ ಹಣ ಸುಲಿಗೆ ಕೇಸ್‌ನ ₹30 ಸಾವಿರ ಮತ್ತು ಕಳ್ಳತನಕ್ಕೆ ಬಳಸಿದ್ದ ₹2 ಲಕ್ಷ ಮೌಲ್ಯದ ಓಮಿನಿ ವಾಹನ ಸೇರಿ ಒಟ್ಟು ₹4.50 ಲಕ್ಷ ಮೌಲ್ಯದ ಕಳವು ಮಾಡಿದ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ರುದ್ರಪ್ಪ ಎಸ್.ಉಜ್ಜನಕೊಪ್ಪ ತಿಳಿಸಿದ್ದಾರೆ.
ಈ ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಮಹಮ್ಮದ್ ಶಬೀಉಲ್ಲಾ, ನಯಾಜ್, ಸಮೀಉಲ್ಲಾ ಶೇಕ್ ಮುಕ್ತಿಯಾರ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್, ಡಿವೈಎಸ್ಪಿ ರುದ್ರಪ್ಪ ಎಸ್.ಉಜ್ಜನಕೊಪ್ಪ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸಪೆಕ್ಟರ್ ಲಿಂಗನಗೌಡ ನೆಗಳೂರು ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಮಿಂಚಿನ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.ಆರೋಪಿಗಳನ್ನು ಪತ್ತೆ ಮಾಡಿದ ಸಿಬ್ಬಂದಿಗೆ ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್ ಶ್ಲಾಘಿಸಿದ್ದಾರೆ.