ಕಳ್ಳತನ ಮಾಡುತ್ತಿದ್ದ ದಂಡುಪಾಳ್ಯ ಗ್ಯಾಂಗ್‌ನ ಮೂವರ ಬಂಧನ

| Published : Feb 01 2025, 12:45 AM IST

ಕಳ್ಳತನ ಮಾಡುತ್ತಿದ್ದ ದಂಡುಪಾಳ್ಯ ಗ್ಯಾಂಗ್‌ನ ಮೂವರ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಮನೆಯ ಬೀಗ ಒಡೆದು ಸುಮಾರು ₹10 ಲಕ್ಷ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿ ಕದ್ದು ಪರಾರಿಯಾಗಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸಹಚರರನ್ನು ತಿರುಮಲಶೆಟ್ಟಿಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಸಕೋಟೆ

ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಮನೆಯ ಬೀಗ ಒಡೆದು ಸುಮಾರು ₹10 ಲಕ್ಷ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿ ಕದ್ದು ಪರಾರಿಯಾಗಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸಹಚರರನ್ನು ತಿರುಮಲಶೆಟ್ಟಿಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸೂರಿ ಅಲಿಯಾಸ್ ಸೈಕೋ ಸೂರಿ, ನಿಡಘಟ್ಟ ಗ್ರಾಮದ ನಿವಾಸಿ ಸುಬ್ರಮಣಿ, ಅಂಕಶೆಟ್ಟಿಹಳ್ಳಿ ಮಾರುತಿ ಬಂಧಿತ ಆರೋಪಿಗಳು. ದಂಡುಪಾಳ್ಯ ಗ್ಯಾಂಗ್‌ನ ಲೀಡರ್ ಬಂಧಿತ ಆರೋಪಿ ಸೂರಿ ನಟೋರಿಯಸ್ ಆಗಿದ್ದು ಈತನ ಮುಖ್ಯ ವೃತ್ತಿ ಕಳ್ಳತನ, ಹೈವೇ ರಾಬರಿ, ಕುರಿ ಕಳ್ಳತನ ಸೇರಿದಂತೆ 25ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.ಬಂಧಿತ ಆರೋಪಿಗಳು ಹೊಸಕೋಟೆ ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ಮನೆಯ ಬೀಗ ಒಡೆದು ಸುಮಾರು ₹10 ಲಕ್ಷ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿ ದೋಚಿ ಪರಾರಿಯಾಗಿದ್ದರು. ಆರೋಪಿಯ ಸುಳಿವು ಪತ್ತೆ ಹಚ್ಚಿದ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಪಿಐ ಸುಂದರ್ ಹಾಗೂ ತಂಡದವರು ತಮಿಳುನಾಡಿನ ತಳಿಯಲ್ಲಿ ಅವಿತು ಕುಳಿತಿದ್ದ ಕಳ್ಳರ ಗ್ಯಾಂಗ್ ಪತ್ತೆ ಹಚ್ಚಿ ಸಿನಿಮೀಯ ರೀತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ₹10 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕಾರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿಗಳ ಪತ್ತೆಯ ತನಿಖೆಯಲ್ಲಿ ಪಿ.ಎಸ್.ಐ. ನಾರಾಯಣಸ್ವಾಮಿ, ಎ.ಎಸ್.ಐ. ವೆಂಕಟೇಶ್, ಸಿಬ್ಬಂದಿಗಳಾದ ಮಂಜುನಾಥ್, ನಟರಾಜ್, ಲಕ್ಷ್ಮೀಕಾಂತ್, ದೇವೆಂದ್ರ ಬಡಿಗೇರ್, ಮುರ್ತೋಜ, ಅಕ್ಷಯ್ ಹಾಗೂ ಇತರರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.