ಸಾರಾಂಶ
ಹನೂರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಟ್ಟಣದ ಗಾಣಿಗರ ಬೀದಿ ನಿವಾಸಿ ಮೋಹನ್ ಕುಮಾರ್ ಕೌದಳ್ಳಿ ಗ್ರಾಮದ ನಿವಾಸಿ ಅಜ್ಮಲ್ ಪಾಷಾ ಬಂಧಿತ ಆರೋಪಿಗಳು.
ಹನೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಟ್ಟಣದ ಗಾಣಿಗರ ಬೀದಿ ನಿವಾಸಿ ಮೋಹನ್ ಕುಮಾರ್ ಅಲಿಯಾಸ್ ಬಾಲಾಜಿ ಕೌದಳ್ಳಿ ಗ್ರಾಮದ ನಿವಾಸಿ ಅಜ್ಮಲ್ ಪಾಷಾ ಬಂಧಿತ ಆರೋಪಿಗಳಾಗಿದ್ದಾರೆ.ಘಟನೆ ವಿವರ: ಮೈಸೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ರಾಮಾಪುರದಿಂದ ಮೈಸೂರಿಗೆ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ ಕವಿತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರ ಮಾರ್ಗದರ್ಶನದಲ್ಲಿ ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಸಾಗರ್ ಹಾಗೂ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಹನೂರು ಪಟ್ಟಣ ಹೊರ ವಲಯದ ಹುಲಸುಗುಡ್ಡೆ ಬೋರೆ ಸಮೀಪ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ನಂತರ ಸಾಗಣೆಗೆ ಬಳಸಿದ್ದ ದ್ವಿಚಕ್ರ ವಾಹನ, ಬಂಧಿತರಿಂದ 2 ಕೆ.ಜಿ 600 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿ ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗಾಂಜಾ ಸಾಗಾಟ ಪ್ರಕರಣದಲ್ಲಿ ಇನ್ನೋರ್ವ ಪರಾರಿಯಾಗಿದ್ದು ಆತನ ಪತ್ತೆಗೆ ಈಗಾಗಲೇ ಬಲೆ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಕಾರ್ಯಚರಣೆಯಲ್ಲಿ ಸಿಬ್ಬಂದಿಗಳಾದ ಮಂಜುನಾಥ್, ಜಗದೀಶ್, ರಮೇಶ್, ಮೋಹನ್, ಚಿಕ್ಕಣ್ಣ, ಚಾಲಕ ಮಲ್ಲೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.