ಸಾರಾಂಶ
ಚಾಮರಾಜನಗರ: ತಾಲೂಕಿನ ಜ್ಯೋತಿಗೌಡನಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ಲೆಕ್ಸ್ ಮತ್ತು ಬುದ್ದ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಸಂಬಂಧ ನೈಜ ಆರೋಪಿಗಳನ್ನು ಬಂಧಿಸಿ, ಎಸ್‌ಐಟಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಮಾರಿಗುಡಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಜಿಲ್ಲಾಡಳಿತ ಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದರು. ಮೆರವಣಿಗೆಯುದ್ದಕ್ಕೂ ಘಟನೆಯನ್ನು ಎಸ್‌ಐಟಿ ತನಿಖೆಗೆ ಒಳಪಡಿಸಬೇಕೆಂಬ ಘೋಷಣೆಗಳನ್ನು ಮೊಳಗಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಕೆಲಕಾಲ ಪ್ರತಿಭಟಿಸಿ, ನೈಜ ಅಪರಾಧಿಗಳನ್ನು ಬಂಧಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಖಂಡ ಎಂ.ರಾಮಚಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಪ್ಲೆಕ್ಸ್ ಮತ್ತು ಬುದ್ದ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯ. ಘಟನೆಯ ಸಂಬಂಧ ನೈಜ ಅಪರಾಧಿಗಳನ್ನು ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈ ವಿಷಯದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿ, ಒಬ್ಬ ವ್ಯಕ್ತಿಯನ್ನು ಬಂಧಿಸಿ ಅವರನ್ನು ಮಾಧ್ಯಮದವರ ಮುಂದೆ ಹೇಳಿಕೆ ನೀಡುವ ಸಂದರ್ಭದಲ್ಲಿ ಆ ವ್ಯಕ್ತಿ ಹೆಸರನ್ನು ಹೇಳಿ, ಜೊತೆಗೆ ನಾಯಕ ಜನಾಂಗವನ್ನೂ ಸಹ ಹೇಳಿ ವಿನಾಃಕಾರಣ ಸಮುದಾಯವನ್ನು ದೂಷಣೆಗೆ ಒಳಪಡಿಸಿದ್ದಾರೆ ಎಂದು ಆರೋಪಿಸಿದರು.
ಹರದನಹಳ್ಳಿ ಗ್ರಾಮದ ಶಿವಣ್ಣ ಎಂಬ ವ್ಯಕ್ತಿಯನ್ನು ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೆ ವಶಕ್ಕೆ ಪಡೆದು, ನೀನು ಸಾಕ್ಷಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಶಿವಣ್ಣ ನಿರಾಕರಿಸಿದಾಗ ಆತನ ಮೇಲೆ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿ ಒತ್ತಾಯಿಸಿದ್ದು, ಶಿವಣ್ಣ ನನಗೆ ಯಾವುದೇ ವಿಚಾರ ನನಗೆ ತಿಳಿದಿಲ್ಲ ಎಂದು ಹೇಳಿದ ಮೇಲೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ ಎಂದು ಆರೋಪಿಸಿದರು.ನಿಜವಾದ ಕೃತ್ಯ ಎಸಗಿರುವ ಆರೋಪಿಗಳನ್ನು ಬಂಧಿಸದೇ ತಮ್ಮ ರಕ್ಷಣೆಗಾಗಿ ಪೊಲೀಸರು ನಿರಪರಾಧಿಯನ್ನು ಬಂಧಿಸಿ, ನಾಯಕ ಜನಾಂಗದ ಮೇಲೆ ವಿನಾಕಾರಣ ಆರೋಪ ಬರುವ ರೀತಿಯಲ್ಲಿ ವರ್ತಿಸುತ್ತಿರುವ ಸ್ಥಳೀಯ ಮತ್ತು ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ವಿರುದ್ಧ ಹಾಗೂ ಹಲ್ಲೆ ಮಾಡಿರುವ ವ್ಯಕ್ತಿಯನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಒತ್ತಾಯಿಸಿದರು.
ಸ್ಥಳೀಯ ಪೊಲೀಸ್ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿದ್ದು, ನಿಷ್ಪಕ್ಷಪಾತ ತನಿಖೆ ಮಾಡಲು ಸಾಧ್ಯವಿಲ್ಲದ ಕಾರಣ ಈ ಪ್ರಕರಣವನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಿಂಪಡೆದು, ಸರ್ಕಾರ ಎಸ್ಐಟಿ ತನಿಖೆ ಅಥವಾ ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಮುಖಂಡರಾದ ಕೆಲ್ಲಂಬಳ್ಳಿ ಸೋಮನಾಯಕ, ಪು.ಶ್ರೀನಿವಾಸನಾಯಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಯಳಂದೂರು ಉಮಾಶಂಕರ್, ಜಯಸುಂದರ್ ಮಾತನಾಡಿದರು. ನಗರಸಭಾ ಮಾಜಿ ಅಧ್ಯಕ್ಷ ಸುರೇಶ್, ಸುರೇಶ್ ನಾಯಕ, ಚುಡಾ ಮಾಜಿ ಅಧ್ಯಕ್ಷ ಆರ್.ಸುಂದರ್, ಸೋಮನಾಯಕ, ಕೃಷ್ಣನಾಯಕ, ಚೆಂಗುಮಣಿ, ಶಿವುವಿರಾಟ್, ಬುಲೆಟ್ ಚಂದ್ರು, ರಾಜೇಶ್, ನಾಗೇಂದ್ರ, ಚಂದ್ರಶೇಖರ್, ಸೋಮೇಶ್, ರಾಮನಾಯಕ, ಚಾ.ಸಿ.ಸೋಮನಾಯಕ, ಅಜಯ್ ಗೌಸ್, ಶಿವರಾಜ್, ಶಿವರಾಮು, ವರದನಾಯಕ, ಮಹೇಂದ್ರ, ವೆಂಕಟೇಶ್, ಸುರೇಶ್‌ನಾಗ್ ಇತರರು ಭಾಗವಹಿಸಿದ್ದರು.
೧೫ಸಿಎಚ್ಎನ್೨ಚಾಮರಾಜನಗರ ತಾಲೂಕು ಜ್ಯೋತಿಗೌಡನಪುರ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ಲಕ್ಸ್ ಮತ್ತು ಬುದ್ದ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ಸಂಬಂಧ ನೈಜ ಆರೋಪಿಗಳನ್ನು ಬಂಧಿಸಿ, ಎಸ್‌ಐಟಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ನಾಯಕ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))