ಅಮಿತ್ ಶಾ ಆಗಮನ: ಕಾರ್ಯಕರ್ತರಿಗೆ ಹೊಸ ಶಕ್ತಿ

| Published : Apr 01 2024, 12:52 AM IST

ಸಾರಾಂಶ

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮಾತ್ರವಲ್ಲದೆ ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಬಿಜೆಪಿ ನಾಯಕ ಅಮಿತ್ ಶಾ ಆಗಮಿಸುತ್ತಿದ್ದಾರೆ. ಅವರ ಆಗಮನದಿಂದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರಿಗೆ ಹೊಸ ಶಕ್ತಿ ಬರಲಿದೆ ಎಂದು ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮಾತ್ರವಲ್ಲದೆ ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಬಿಜೆಪಿ ನಾಯಕ ಅಮಿತ್ ಶಾ ಆಗಮಿಸುತ್ತಿದ್ದಾರೆ. ಅವರ ಆಗಮನದಿಂದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರಿಗೆ ಹೊಸ ಶಕ್ತಿ ಬರಲಿದೆ ಎಂದು ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏ.2ರಂದು ಅಮಿತ್ ಶಾರವರು ಪ್ರಥಮ ಬಾರಿಗೆ ಚುನಾವಣಾ ಪ್ರಚಾರಕ್ಕೆ ಬರುತ್ತಿದ್ದಾರೆ. ಬೆಂಗಳೂರಿನಲ್ಲಿ ಬೇರೆ ಬೇರೆ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಚನ್ನಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ ಎಂದರು.

ಅಮಿತ್ ಶಾ ಅವರೊಂದಿಗೆ ಬಿಜೆಪಿ ರಾಜ್ಯ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.ಬಾಕ್ಸ್‌..............

ಏ.4ಕ್ಕೆ ನಾಮಪತ್ರ ಸಲ್ಲಿಕೆ

ರಾಮನಗರ: ಏ.4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ. ಬಿಜೆಪಿ - ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಮೆರವಣಿಗೆ, ಸಮಾವೇಶದ ಕುರಿತು ರೂಪುರೇಷೆ ಮಾಡಲಾಗುತ್ತಿದೆ ಎಂದು ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್‌ ಹೇಳಿದರು.ಬಾಕ್ಸ್‌...........ಎಚ್ಡಿಕೆ ಶಸ್ತ್ರಚಿಕಿತ್ಸೆ ವಿಚಾರಕ್ಕೆ ಶಾಸಕ

ರಮೇಶ್ ಬಂಡಿಸಿದ್ದೇಗೌಡರಿಗೆ ತಿರುಗೇಟು

ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಅನುಮಾನ ವ್ಯಕ್ತಪಡಿಸಿರುವ ಶ್ರೀರಂಗಪಟ್ಟಣ ಕ್ಷೇತ್ರ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಂಜುನಾಥ್, ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಮಾಡುವಾಗ ನಾನು ಇದ್ದೆ. ಆಧುನಿಕ ತಂತ್ರಜ್ಞಾನದಲ್ಲಿ ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಮಾಡಲಾಗಿದೆ. ಸರಿಯಾದ ಮಾಹಿತಿ ಇಲ್ಲದೆ ಯಾರೂ ಯಾವುದರ ಬಗ್ಗೆಯೂ ಮಾತನಾಡಬಾರದು ಎಂದು ಶ್ರೀರಂಗಪಟ್ಟಣ ಕ್ಷೇತ್ರ ಶಾಸಕ ರಮೇಶ್ ಬಂಡಿಸಿದ್ದೇಗೌಡರಿಗೆ ತಿರುಗೇಟು ನೀಡಿದರು.

ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ತಿಳಿದುಕೊಳ್ಳಲು ಒಟ್ಟು 13 ವರ್ಷ ಓದಬೇಕು. ಇದು ಆಧುನಿಕ ತಂತ್ರಜ್ಞಾನದ ಶಸ್ತ್ರ ಚಿಕಿತ್ಸೆ. ಸಾಮಾನ್ಯ ವೈದ್ಯರಿಗೂ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಅಷ್ಟು ಮಾಹಿತಿ ಇರಲ್ಲ. ಇನ್ನೂ ಇದರ ಬಗ್ಗೆ ಸಾಮಾನ್ಯ ಜನಕ್ಕೆ ಏನು ಗೊತ್ತಾಗುತ್ತೆ? ಯಾವತ್ತೂ ಯಾವುದೇ ಮಾಹಿತಿ ಇಲ್ಲದೇ ಯಾವುದರ ಬಗ್ಗೆಯೂ ಮಾತನಾಡಬಾರದು. ಜ್ಞಾನಿಗಳು ಜ್ಞಾನಿಗಳಾಗೆಯೇ ಇರಬೇಕು, ಇನ್ನೊಂದು ಆಗಬಾರದು ಎಂದು ಟಾಂಗ್ ನೀಡಿದರು.

ಕುಮಾರಸ್ವಾಮಿ ಅವರಿಗೆ 2007ರಲ್ಲಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಮಾಡಿ ಕವಾಟ ಜೋಡಿಸಲಾಗಿದೆ. 2017ರಲ್ಲಿ ಎರಡನೇ ಬಾರಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಇದೀಗ ಮೂರನೇ ಬಾರಿ ಆಧುನಿಕ ತಂತ್ರಜ್ಞಾನ ಬಳಸಿ ಕಾಲಿನ ರಕ್ತನಾಳದ ಮೂಲಕ ಕವಾಟ ಬದಲಾಯಿಸಲಾಗಿದೆ. ಆಂಜಿಯೋಗ್ರಾಂ ತಂತ್ರಜ್ಞಾನ ಬಳಸಿ ಮಾಡುವ ಈ ಶಸ್ತ್ರ ಚಿಕಿತ್ಸೆಯನ್ನು ಟಾವಿ ಎನ್ನಲಾಗುತ್ತದೆ. ನಾನು ಸಹ ಇಂತಹ ಶಸ್ತ್ರ ಚಿಕಿತ್ಸೆಯನ್ನು ಮಾಡಿದ್ದೇನೆ ಎಂದು ಹೇಳಿದರು.

ಬೆಂಗಳೂರಿನಲ್ಲಿಯೇ ಕುಮಾರಸ್ವಾಮಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಬಹುದಾಗಿತ್ತು. ಆದರೆ, ಚುನಾವಣೆ ಸಂದರ್ಭವಾಗಿರುವ ಕಾರಣ ಇಲ್ಲಿ ಅವರಿಗೆ ಒತ್ತಡ ಹೆಚ್ಚಾಗಬಹುದೆಂಬ ಕಾರಣಕ್ಕೆ ಚೆನ್ನೈನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದರು ಎಂದು ಮಂಜುನಾಥ್ ತಿಳಿಸಿದರು.

31ಕೆಆರ್ ಎಂಎನ್ 7.ಜೆಪಿಜಿ

ಡಾ.ಸಿ.ಎನ್. ಮಂಜುನಾಥ್