ಸಾರಾಂಶ
ನಗರದ ಟೋಲ್ ಗೇಟ್ ಸಮೀಪದಲ್ಲಿ ಗುರುವಾರ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿ.ಟಿ. ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಕಾರನ್ನು ಬದಿಗೆ ಸರಿಸುವಂತೆ ಸೂಚಿಸಿದರು. ಆಗ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್ ಮೇಲೆಯೇ ಕಾರು ಹಾಯಿಸಲು ಯತ್ನಿಸಿ ತಪ್ಪಿಸಿದ್ದ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಶಿವಮೊಗ್ಗದಲ್ಲಿ ಗುರುವಾರವಷ್ಟೇ ಸಂಚಾರಿ ಪೊಲೀಸ್ ಸಿಬ್ಬಂದಿ ಹತ್ಯೆಗೆ ಚಾಲಕ ಯತ್ನಿಸಿದ ಪ್ರಕರಣದ ಬೆನ್ನಲ್ಲೇ ಮಡಿಕೇರಿಯಲ್ಲೂ ಇದೇ ಮಾದರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಸಂಚಾರಿ ಪೊಲೀಸ್ ಸಿಬ್ಬಂದಿ ಮೇಲೆಯೇ ಕಾರು ಹರಿಸಲು ಮುಂದಾದ ಚಾಲಕನನ್ನು ಮಡಿಕೇರಿ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ನಜೀರ್ ಬಂಧಿತ ಆರೋಪಿ.
ನಗರದ ಟೋಲ್ ಗೇಟ್ ಸಮೀಪದಲ್ಲಿ ಗುರುವಾರ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ಜಿ.ಟಿ. ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸಂಜು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಕಾರನ್ನು ಬದಿಗೆ ಸರಿಸುವಂತೆ ಸೂಚಿಸಿದರು. ಆಗ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೇಬಲ್ ಮೇಲೆಯೇ ಕಾರು ಹಾಯಿಸಲು ಯತ್ನಿಸಿ ತಪ್ಪಿಸಿದ್ದ.ಸಂಚಾರಿ ಪೊಲೀಸ್ ಸಿಬ್ಬಂದಿ ಸಂಜು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪೊಲೀಸರು ಆತನ ಬೆನ್ನಟ್ಟಲುಯತ್ನಿಸಿದರೂ ಆತ ಕಣ್ಣು ತಪ್ಪಿಸಿ ಪರಾರಿಯಾಗಿದ್ದ.
ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಚುರುಕುಗೊಳಿಸಿ, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್‌ನನ್ನು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.ಸಂಚಾರಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿ ಬಂಧಿಸಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಕೊಡಗು ಎಸ್ಪಿ ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.