ಸಾರಾಂಶ
- ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಕಡಕೋಳ ಅಭಿಮತ - - - ಕನ್ನಡಪ್ರಭ ವಾರ್ತೆ ದಾವಣಗೆರೆ ವಾಣಿಜ್ಯ ನಗರಿ ದಾವಣಗೆರೆಯು ಸಾಂಸ್ಕೃತಿಕ ನಗರಿಯಾಗಿಯೂ ಪರಿವರ್ತನೆ ಆಯಾಗುತ್ತಿರುವುದು ಶ್ಲಾಘನೀಯ ಎಂದು ವೃತ್ತಿರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಹೇಳಿದರು.
ನಗರದ ಕೆ.ಬಿ. ಬಡಾವಣೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಭಾಂಗಣದಲ್ಲಿ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕದ ಕರಾವಳಿ ಜಿಲ್ಲೆಗಳ ಅಪ್ಪಟ ಕನ್ನಡದ ಆರಾಧನಾ ಕಲೆ ಯಕ್ಷಗಾನವನ್ನು ಮೊಟ್ಟಮೊದಲು ದಾವಣಗೆರೆಗೆ ಪರಿಚಯಿಸಿದ್ದು ಯಕ್ಷರಂಗ. ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಎಲ್ಲರ ಜೀವನಕ್ಕೆ ಸ್ಫೂರ್ತಿಯಾಗಬಲ್ಲವು ಎಂದರು.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಮಾತನಾಡಿ, ಮಾನವನ ಜೀವನಕ್ಕೆ ಬೆಳೆಕು ಕೊಡುವ ಹಬ್ಬ ದೀಪಾವಳಿ. ಕನ್ನಡ ನಾಡು-ನುಡಿಯ ಕಾಯಕ ಕೇವಲ ರಾಜ್ಯೋತ್ಸವಕ್ಕೆ ಸೀಮಿತವಾಗದೇ, ಹಿರಿಯ ಕವಿ ನಿಸಾರ್ ಅಹಮದ್ ಹೇಳಿದಂತೆ ಕನ್ನಡ ನಿತ್ಯೋತ್ಸವವಾಗಲಿ ಎಂದರು.ಕಲಾಕುಂಚ ಮಹಿಳಾ ವಿಭಾಗ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ ಮಾತನಾಡಿ, ಸಂಘಟನೆಗಳನ್ನು ನಿರಂತರ ನಿರ್ವಹಿಸುವುದು ಸುಲಭದ ಮಾತಲ್ಲ. ತಾಳ್ಮೆಯಿಂದ ಸಂಕುಚಿತ ಭಾವನೆ ಬಿಟ್ಟು ವಿಶಾಲವಾದ ಸೇವಾ ಮನೋಭಾವನೆಯೊಂದಿಗೆ ನಿರ್ವಹಿಸಬೇಕು. ಆಗ ಸಂಸ್ಥೆಗಳು ಮುಂದುವರಿಯುತ್ತವೆ ಎಂದರು.
ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಇ.ಎಂ. ಮಂಜುನಾಥ, ವೃತ್ತಿರಂಗಭೂಮಿ ರಂಗಾಯನ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಅವರನ್ನು ಸನ್ಮಾನಿಸಲಾಯಿತು.ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ, ಯಕ್ಷರಂಗ ಯಕ್ಷಗಾನ ಸಂಸ್ಥೆ ಅಧ್ಯಕ್ಷ ಮಲ್ಯಾಡಿ ಪ್ರಭಾಕರ ಶೆಟ್ಟಿ, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ವಿವಿಧ ಬಡಾವಣೆಗಳ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ, ವಿ.ಕೃಷ್ಣಮೂರ್ತಿ, ಕಲಾಕುಂಚದ ಅಧ್ಯಕ್ಷ ಕೆ.ಎಚ್.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಯಕ್ಷರಂಗದ ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್‌ಕುಮಾರ್ ಶೆಟ್ಟಿ, ಚಂದ್ರಶೇಖರ ಅಡಿಗ, ಮುಕ್ತಾ ಶ್ರೀನಿವಾಸ್ ಪ್ರಭು, ಶಾರದಾ ಕೃಷ್ಣಪ್ರಭು, ಶಾರದಮ್ಮ ಶಿವನಪ್ಪ ಇತರರು ಉಪಸ್ಥಿತರಿದ್ದರು.
- - - -28ಕೆಡಿವಿಜಿ31ಃ:ದಾವಣಗೆರೆಯಲ್ಲಿ ಕಲಾಕುಂಚ ಸಂಸ್ಥೆಯಿಂದ ನಡೆದ ಕನ್ನಡ ರಾಜ್ಯೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ವೃತ್ತಿರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಉದ್ಘಾಟಿಸಿದರು.