ಸಾರಾಂಶ
ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿಕೃತಕ ಬುದ್ಧಿಮತ್ತೆಯಿಂದ ಉದ್ಯೋಗವಕಾಶ ಕಡಿಮೆಯಾಗುತ್ತಿಲ್ಲ. ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಜಿ.ಎಸ್.ತ್ಯಾಗರಾಜು ಹೇಳಿದ್ದಾರೆ.ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ವಿಭಾಗದ ಕಾರ್ಯಚಟುವಟಿಕೆಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ವಿಶೇಷ ಉಪನ್ಯಾಸ ನೀಡಿದ ಅವರು, ಕೃತಕ ಬುದ್ಧಿಮತ್ತೆಗೆ ಪೂರಕ ಹೊಸ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕಂಪ್ಯೂಟರ್ ಆವಿಪ್ಕಾರವಾದಾಗ ಹಲವರು ಉದ್ಯೋಗವಕಾಶಗಳನ್ನು ಕಳೆದುಕೊಂಡರು. ಮುಂದೆ ಅದರೊಂದಿಗೆಯೇ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಹೊಸ ಬಗೆಯ ಉದ್ಯೋಗಳನ್ನು ಸೃಷ್ಟಿಸಿಕೊಂಡರು. ಅದರಂತೆಯೇ ಆರ್ಟಿಫಿಷಿಯಲ್ ಇಂಟಲಿಜೆನ್ಸ್‌ನ ಹೊಸ ಕೌಶಲ್ಯಗಳೊಂದಿಗೆ ಮುಂದುವರಿಯಬೇಕಾಗಿದೆ ಎಂದರು.ಎಐ ಈಗ ಪ್ರವರ್ಧಮಾನಕ್ಕೆ ಬರುತ್ತಿರುವ ತಾಂತ್ರಿಕತೆ. ಸಂಖ್ಯಾಶಾಸ್ತçದ ಸಾಧ್ಯತೆಗಳನ್ನು ಎಐ ವಿಸ್ತರಿಸಬಲ್ಲದು. ಸಂಖ್ಯಾಶಾಸ್ತç ವಲಯದಲ್ಲಿ ನೂತನ ಆವಿಷ್ಕಾರಗಳನ್ನು ರೂಪಿಸುವುದಕ್ಕೆ ಎಐ ತಂತ್ರಜ್ಞಾನವನ್ನು ಪೂರಕವಾಗಿಸಿಕೊಳ್ಳಬೇಕು. ಎಲ್ಲಾ ವಿಷಯಗಳಲ್ಲಿಯೂ ನಿಖರತೆ ಅವಶ್ಯಕ. ಈ ನಿಖರತೆಗೆ ಸಂಖ್ಯಾಶಾಸ್ತ್ರದ ಅಗತ್ಯವಿದೆ. ಈ ನಿಖರತೆಯ ಸ್ವರೂಪವನ್ನು ಇನ್ನಷ್ಟು ಅಧಿಕೃತಗೊಳಿಸುವುದಕ್ಕೆ ಎಐ ತಂತ್ರಜ್ಞಾನ ನೆರವಾಗುತ್ತದೆ ಎಂದು ಹೇಳಿದರು.
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಸೌಮ್ಯ ಬಿ.ಪಿ. ಅಧ್ಯಕ್ಷತೆ ವಹಿಸಿದ್ದರು.ವಿಭಾಗದ ಮುಖ್ಯಸ್ಥೆ ಡಾ.ಸವಿತಾ ಕುಮಾರಿ ಉಪಸ್ಥಿತರಿದ್ದರು. ದ್ವಿತೀಯ ಎಂಎಸ್ಸಿ ವಿದ್ಯಾರ್ಥಿನಿ ಪ್ರಕೃತಿ ಟಿ.ಪಿ ವಂದಿಸಿದರು.