ಸಾರಾಂಶ
ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತು ಐದು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಜ್ಞಾನ ವಿನಿಮಯ ಮತ್ತು ವೃತ್ತಿಪರ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆಯಾಗಿ, ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ವಿಭಾಗವು ಜ.16 ರಿಂದ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ನ ಕೈಗಾರಿಕಾ ಉಪಯುಕ್ತತೆಯ ಕುರಿತು ಐದು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮ (ಎಫ್‌ಪಿಪಿ) ಆಯೋಜಿಸಿತ್ತು.ವಿಫ್ಲಿ ಎಲ್.ಎಲ್.ಪಿ ಯ ಮಾಜಿ ಪಾಲುದಾರ ಮುರಳಿ ಅಯ್ಯರ್ ಕಾರ್ಯಕ್ರಮ ಉದ್ಘಾಟಿಸಿ ತಮ್ಮ ಉದ್ಯಮದ ಅನುಭವ ಹಾಗೂ ಕಲಿಕೆ ಹೇಗಿರಬೇಕು ಎಂಬುದರ ಬಗೆಗೆ ಅಭಿಪ್ರಾಯವನ್ನು ಹಂಚಿಕೊಂಡರು. ಅವರ ಭಾಷಣವು ಪ್ರೇಕ್ಷಕರಿಗೆ ಸ್ಫೂರ್ತಿ ನೀಡಿತು, ಈ ಅತ್ಯಾಧುನಿಕ ಕ್ಷೇತ್ರಗಳಲ್ಲಿ ಭವಿಷ್ಯದ ಕಾರ್ಯಪಡೆಯನ್ನು ರೂಪಿಸುವಲ್ಲಿ ಶಿಕ್ಷಣ ತಜ್ಞರು ವಹಿಸುವ ಪ್ರಮುಖ ಪಾತ್ರವನ್ನು ಅವರು ವಿವರಿಸಿದರು.
ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಸಮಾರಂಭದ ಅಧ್ಯಕ್ಷತೆ ವಹಿಸಿ, ತಾಂತ್ರಿಕ ಪ್ರಗತಿಯಲ್ಲಿ ಮುಂಚೂಣಿಯಲ್ಲಿರಲು ಸಂಸ್ಥೆಯ ಬದ್ಧತೆಯನ್ನು ಹೇಳಿದರು. ಐದು ದಿನಗಳ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಂ ಜ್ಞಾನ ವಿನಿಮಯದ ಕೇಂದ್ರವಾಗಲಿದೆ, ಕೃತಕ ಬುದ್ಧಿಮತ್ತೆ ಮತ್ತು ಡೇಟಾ ವಿಜ್ಞಾನ ಕ್ಷೇತ್ರಗಳಲ್ಲಿ ಸಹಯೋಗ ಮತ್ತು ನಾವೀನ್ಯತೆಯನ್ನು ಉತ್ತೇಜಿಸುತ್ತದೆ ಎಂದರು.ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ ಪಿ.ಎಸ್ ಸ್ವಾಗತದೊಂದಿಗೆ ಕಾರ್ಯಕ್ರಮದ ಉದ್ದೇಶಗಳು ಮತ್ತು ಪ್ರಾಮುಖ್ಯತೆಯ ಬಗೆಗೆ ತಿಳಿಸಿದರು.
ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಜ್ವಲ್ ಹೆಗ್ಡೆ ಮುಖ್ಯ ಅತಿಥಿಯಾದ ಮುರಳಿ ಅಯ್ಯರ್ ಅವರನ್ನು ಪರಿಚಯಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅಂಕಿತಾ ಕೆ ವಂದಿಸಿದರು. ಇನ್ನೋರ್ವ ಸಹಾಯಕ ಪ್ರಾಧ್ಯಾಪಕಿ ಅಂಕಿತಾ ಶೆಟ್ಟಿ ನಿರೂಪಿಸಿದರು.