ಸಾರಾಂಶ
ಛತ್ತೀಸಗಡ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ‘ಕಾರ್ಟೂನ್ ವಾಚ್’ ನಿಯತಕಾಲಿಕೆ‘ಪ್ರವಾಸಿಗರು ಭಯೋತ್ಪಾದಕರಿಗೆ ಹೆದರುವದಿಲ್ಲ’ಎಂಬ ವಿಷಯವಾಗಿ ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ವ್ಯಂಗ್ಯಚಿತ್ರಗಳ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಕಾಂತೇಶ ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಧಾರವಾಡ: ಮೂಲತಃ ತಾಲೂಕಿನ ಅಮ್ಮಿನಬಾವಿ ಗ್ರಾಮದವರಾದ ಖ್ಯಾತ ವ್ಯಂಗ್ಯಚಿತ್ರಕಲಾವಿದ ಕಾಂತೇಶ ಎಂ. ಬಡಿಗೇರ ಅವರಿಗೆ ರಾಷ್ಟ್ರೀಯ ವ್ಯಂಗ್ಯಚಿತ್ರ ವಿಶೇಷ ಪುರಸ್ಕಾರ ಲಭಿಸಿದೆ.
ಛತ್ತೀಸಗಡ ಸರ್ಕಾರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ‘ಕಾರ್ಟೂನ್ ವಾಚ್’ ನಿಯತಕಾಲಿಕೆ‘ಪ್ರವಾಸಿಗರು ಭಯೋತ್ಪಾದಕರಿಗೆ ಹೆದರುವದಿಲ್ಲ’ಎಂಬ ವಿಷಯವಾಗಿ ಆಯೋಜಿಸಿದ್ದ ಅಖಿಲ ಭಾರತ ಮಟ್ಟದ ವ್ಯಂಗ್ಯಚಿತ್ರಗಳ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಕಾಂತೇಶ ಈ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.ಕಳೆದ 30 ವರ್ಷಗಳಿಂದ ವ್ಯಂಗ್ಯಚಿತ್ರಗಳನ್ನು ರಚಿಸುತ್ತಿದ್ದು, ಬೆಂಗಳೂರಿನಲ್ಲಿ ಜರುಗಿದ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನಗಳಲ್ಲಿ ತಮ್ಮ ವಿಶಿಷ್ಟ ವ್ಯಂಗ್ಯಚಿತ್ರಗಳನ್ನು ಪ್ರದರ್ಶಿಸಿದ್ದು, ಹತ್ತು ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಇವರ ವ್ಯಂಗ್ಯಚಿತ್ರಗಳು ಆಯ್ಕೆಯಾಗಿ ಸಾಕಷ್ಟು ಹೆಸರು ಮಾಡಿವೆ. ರಾಷ್ಟ್ರೀಯ ವ್ಯಂಗ್ಯಚಿತ್ರ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿರುವ ಕಾಂತೇಶ ಬಡಿಗೇರ ಅವರನ್ನು ನಿವೃತ್ತ ಶಿಕ್ಷಕ ಗುರುಮೂರ್ತಿ ಯರಗಂಬಳಿಮಠ ಅಭಿನಂದಿಸಿದ್ದಾರೆ.