ಅಂಬೇಡ್ಕರ್‌ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕು

| Published : Jan 27 2024, 01:21 AM IST

ಸಾರಾಂಶ

ಬಾಬಾ ಸಾಹೇಬ್ ಅಂಬೇಡ್ಕರ್‌ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕಾಗಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಮಾಜ ನಿರ್ಮಾಣಗೊಳ್ಳಬೇಕಾಗಿದೆ. ಆದರೆ, ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಅವರನ್ನು ಆಹ್ವಾನಿಸದೇ ಅವಮಾನಿಸಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಗೌರವ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಭದ್ರಾವತಿಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಭದ್ರಾವತಿ

ಬಾಬಾ ಸಾಹೇಬ್ ಅಂಬೇಡ್ಕರ್‌ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕಾಗಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಮಾಜ ನಿರ್ಮಾಣಗೊಳ್ಳಬೇಕಾಗಿದೆ ಎಂದದು ಶಾಸಕ ಬಿ.ಕೆ. ಸಂಗಮೇಶ್ವರ ಹೇಳಿದರು.

ನಗರದ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಅವರನ್ನು ಆಹ್ವಾನಿಸದೇ ಅವಮಾನಿಸಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಗೌರವ ಎಂದು ಟೀಕಿಸಿದರು.

ತಹಸೀಲ್ದಾರ್ ಕೆ.ಆರ್. ನಾಗರಾಜು ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಬಿ.ಪಿ. ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪಸ್ಥಿತರಿದ್ದರು.

ಉಪ ತಹಸೀಲ್ದಾರ್ ರಾಧಾಕೃಷ್ಣ ಭಟ್, ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಸ್ವಾತಂತ್ರ್ಯ ಹೋರಾಟಗಾರರು, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಮತ್ತು ನಾಗರಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ಪೊಲೀಸ್ ಸಶಸ್ತ್ರ ಮೀಸಲು ಪಡೆ, ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್), ಗೃಹರಕ್ಷಕ ದಳ ಹಾಗೂ ವಿವಿಧ ಶಾಲಾ-ಕಾಲೇಜುಗಳ ತಂಡಗಳಿಂದ ಪಥ ಸಂಚಲ ನಡೆಯಿತು. ಪೊಲೀಸ್ ಉಪ ನಿರೀಕ್ಷಕ ಶ್ರೀಶೈಲ ಕೆಂಚಣ್ಣನವರು ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು.

ಜನ್ನಾಪುರ ವಾಣಿಗಾನ ಕಲಾ ಮಂದಿರದ ವಿದ್ಯಾನ್ ಎಸ್. ಸೋಮು ಮತ್ತು ಶಿಷ್ಯ ವೃಂದದಿಂದ ಸಾಮೂಹಿಕ ವೀನಾವಾದನ ಸೇರಿದಂತೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರು, ಪ್ರತಿಭಾವಂತ ವಿದ್ಯಾರ್ಥಿಗಳು, ಕ್ರೀಡಾಪಟುಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿದರು.

- - - -ಡಿ26-ಬಿಡಿವಿಟಿ:

ಭದ್ರಾವತಿಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಕೆ.ಆರ್. ನಾಗರಾಜು ಧ್ವಜಾರೋಹಣ ನೆರವೇರಿಸಿದರು. -ಡಿ26-ಬಿಡಿವಿಟಿ(ಎ):

ಭದ್ರಾವತಿ ಜನ್ನಾಪುರ ವಾಣಿಗಾನ ಕಲಾ ಮಂದಿರದ ವಿದ್ಯಾನ್ ಎಸ್. ಸೋಮು ಮತ್ತು ಶಿಷ್ಯ ವೃಂದದಿಂದ ಸಾಮೂಹಿಕ ವೀಣಾವಾದನ ಸೇರಿದಂತೆ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.