ಸೂರ್ಯ, ಚಂದ್ರ ಇರುವವರೆಗೂ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಭೂಮಿ ಮೇಲೆ ಶಾಶ್ವತವಾಗಿ ಇರುತ್ತದೆ. ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಂದು ಮುಖ್ಯ ಭಾಷಣಕಾರ ಹಾಗೂ ನಿವೃತ್ತ ಪ್ರಾಂಶುಪಾಲರಾದ ಮಾರಪ್ಪ ತಿಳಿಸಿದರು.ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಪಾವಗಡ
ಸೂರ್ಯ, ಚಂದ್ರ ಇರುವವರೆಗೂ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಭೂಮಿ ಮೇಲೆ ಶಾಶ್ವತವಾಗಿ ಇರುತ್ತದೆ. ಮಹರ್ಷಿ ವಾಲ್ಮೀಕಿ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಂದು ಮುಖ್ಯ ಭಾಷಣಕಾರ ಹಾಗೂ ನಿವೃತ್ತ ಪ್ರಾಂಶುಪಾಲರಾದ ಮಾರಪ್ಪ ತಿಳಿಸಿದರು.ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮುಖ್ಯ ಅತಿಥಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಲೋಕೇಶ್ ಪಾಳೇಗಾರ್ ಮಾತನಾಡಿ, ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3ರಿಂದ ಶೇ. 7ಕ್ಕೆ ಹಾಗೂ ಪರಿಶಿಷ್ಟ ಜಾತಿ ಮೀಸಲಾತಿ ಶೇ.15ರಿಂದ ಶೇ. 17ಕ್ಕೆ ಹೆಚ್ಚಿಸುವ ಕುರಿತು ಬಸವರಾಜ ಬೊಮ್ಮಾಯಿ ಸರ್ಕಾರ ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಾರ್ವಜನಿಕರು ರಾಜ್ಯ ಉಚ್ಚ ನ್ಯಾಯಾಲಯದ ಮೊರೆ ಹೋದ ಹಿನ್ನೆಲೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪ್ರಗತಿ ಪರ ಚಿಂತಕ ಕೆ. ರಾಮಪುರದ ಆನಂದ್ ಮಾತನಾಡಿದರು. ಸಮುದಾಯದ ಮುಖಂಡರು ಕಪ್ಪು ಪಟ್ಟಿ ಧರಿಸಿ ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯ ಥ್ರೋ ಬಾಲ್ ತಂಡವನ್ನು ಪ್ರತಿನಿಧಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪಾವಗಡಕ್ಕೆ ಕೀರ್ತಿ ತಂದ ಜಿ.ಎಂ.ರಾಜಲಕ್ಷ್ಮಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಉಪತಹಸೀಲ್ದಾರ್ ಚಂದ್ರಶೇಖರ್, ಪಾವಗಡ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಸುರೇಶ್ ಗೌಡ, ಗ್ರಾಮೀಣ ವೃತ್ತ ನಿರೀಕ್ಷಕ ಕೊಟ್ರೇಶ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಯತೀಶ್, ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್, ಬಿಇಒ ರೇಣುಕಾಮ್ಮ, ಬಿಸಿಎಂ ವಿಸ್ತರಣಾಧಿಕಾರಿ ಕುಮಾರ್, ಅಬಕಾರಿ ಇಲಾಖೆ ಮೈಕಲ್, ತಾಪಂ ಅಧಿಕಾರಿ ಮಾರುತಿ ಪ್ರಸಾದ್, ಶಿಕ್ಷಕ ರಾಮಾಂಜನೇಯ, ಕಸಬಾ ಆರ್ಐ ರಾಜಗೋಪಾಲ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ರಾಜೇಶ್, ವಾಲ್ಮೀಕಿ ಯುವಕ ಸಂಘದ ಗೌರವಾಧ್ಯಕ್ಷ ಮೂರ್ತಿ, ಸಂಘದ ಅಧ್ಯಕ್ಷ ಹಾಗೂ ವಕೀಲ ನರಸಿಂಹ ಕೃಷ್ಣ, ಪತ್ರಕರ್ತರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ ಇತರರಿದ್ದರು.