ಸಾರಾಂಶ
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಕನ್ನಡಪ್ರಭ ವಾರ್ತೆ ಮೈಸೂರುಎಸ್ಎಸ್ಎಲ್ಸಿ ಪರೀಕ್ಷೆಗಾದಿ ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾ.21 ರಿಂದ ಏಪ್ರಿಲ್ 4 ರವರಗೆ ಎಸ್ಎಸ್ಎಲ್ಸಿ ಪರೀಕ್ಷೆಯು ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.ಈ ಬಾರಿ ಜಿಲ್ಲೆಯಲ್ಲಿ 39103 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಈ ಪೈಕಿ ಬಾಲಕರು 19114, ಬಾಲಕಿಯರು 18970 ಇದ್ದಾರೆ. ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು ಮಾಡಲಾಗಿದೆ.ಬೇಸಿಗೆ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ ತಿಳಿಸಿದ್ದಾರೆ. ನಿಷೇಧಾಜ್ಞೆ ಜಾರಿಮಾ.21 ರಿಂದ ಏ.4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1 ನಗರ ವ್ಯಾಪ್ತಿಯಲ್ಲಿ 43 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023 ಸೆಕ್ಷನ್ 163 ರೀತ್ಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ರವಗೆಗೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಇತರೆ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರು ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್/ ಬ್ರೌಸಿಂಗ್ ಸೆಂಟರ್ ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಅವರು ಸೂಚಿಸಿದ್ದಾರೆ.