ಅಪಘಾತಕ್ಕೆ ತಾನೇ ಕಾರಣವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ!

| Published : Feb 13 2024, 12:46 AM IST

ಅಪಘಾತಕ್ಕೆ ತಾನೇ ಕಾರಣವೆಂದು ಮನನೊಂದು ವ್ಯಕ್ತಿ ಆತ್ಮಹತ್ಯೆ!
Share this Article
  • FB
  • TW
  • Linkdin
  • Email

ಸಾರಾಂಶ

ನಗರದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯ ಸಾವಿಗೆ ತಾನೇ ಕಾರಣನೆಂದು ಮನನೊಂದ ಬೈಕ್ ಸವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯ ಸಾವಿಗೆ ತಾನೇ ಕಾರಣನೆಂದು ಮನನೊಂದ ಬೈಕ್ ಸವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೆರವನಾಡಿನ ತಮ್ಮಯ್ಯ (57) ಎಂಬುವರು ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ ತಮ್ಮ ಬೈಕ್‌ನಲ್ಲಿ ಬರುತ್ತಿದ್ದ ತಮ್ಮಯ್ಯ, ಚೈನ್‌ಗೇಟ್‌ ಬಳಿ ಮೂರು ರಸ್ತೆ ಸೇರುವ ಪ್ರದೇಶದಲ್ಲಿ ಎದುರಿನಿಂದ ಬರುತ್ತಿದ್ದ ವಿದ್ಯಾರ್ಥಿ ಧನಲ್ ಸುಬ್ಬಯ್ಯರ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದರು.

ಈ ವೇಳೆ, ಧನಲ್ ನೆಲಕ್ಕೆ ಬಿದ್ದಿದ್ದು, ಮೇಲೇಳುವ ಸಂದರ್ಭ ವೇಗವಾಗಿ ಬಂದ ಲಾರಿ ಅವರ ಮೇಲೆ ಹರಿದಿತ್ತು. ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು. ಗಾಯಾಳುವನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಧನಲ್‌ ಭಾನುವಾರ ಬೆಳಗ್ಗೆ ಮೃತಪಟ್ಟರು. ಅಪಘಾತದ ಭೀಕರ ದೃಶ್ಯ ನೋಡಿ ಮನನೊಂದಿದ್ದ ತಮ್ಮಯ್ಯ, ತೀವ್ರ ಪಶ್ಚಾತ್ತಾಪದಿಂದ ಬಳಲುತ್ತಿದ್ದ ತಮ್ಮಯ್ಯ, ಸೋಮವಾರ ಬೆಳಗಿನ ಜಾವ ನೇಣಿಗೆ ಶರಣಾಗಿದ್ದಾರೆ.