ಸಾರಾಂಶ
ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣವಾಗಿದ್ದಾರೆ. ಬೆಂಗಳೂರಿನಲ್ಲಿ ₹ 15000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಹೋರಾಟದಲ್ಲಿ 42000 ಕಾರ್ಯಕರ್ತೆಯರು ಭಾಗವಹಿಸಿದ್ದರು. ಪ್ರತಿಭಟನೆಗೆ ಸ್ಪಂದಿಸಿದ ಸರ್ಕಾರ ಶೀಘ್ರ ಬೇಡಿಕೆ ಈಡೇರಿಸುವ ಕುರಿತು ಚರ್ಚಿಸಲಾಗುವುದು ಎಂದು ಭರವಸೆ ನೀಡಿತ್ತು. ಆದರೆ, ಈ ವರೆಗೂ ಜಾರಿಗೊಳಿಸಿಲ್ಲ.
ಕೊಪ್ಪಳ:
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಮಂಗಳವಾರದಿಂದ ಮೂರು ದಿನ ನಗರದ ಶಾದಿಮಹಲ್ ಆವರಣದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ನೇತೃತ್ವದಲ್ಲಿ ಇಲ್ಲಿನ ಕೊಪ್ಪಳ ಈಶ್ವರ ಪಾರ್ಕ್‌ನಿಂದ ಅಶೋಕ್ ಸರ್ಕಲ್, ಬಸ್ ನಿಲ್ದಾಣ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ಶಾದಿಮಹಲ್ ಆವರಣದಲ್ಲಿ ಧರಣಿ ಪ್ರಾರಂಭಿಸಿದ್ದಾರೆ.
ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣವಾಗಿದ್ದಾರೆ.ಬೆಂಗಳೂರಿನಲ್ಲಿ ₹ 15000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಹೋರಾಟದಲ್ಲಿ 42000 ಕಾರ್ಯಕರ್ತೆಯರು ಭಾಗವಹಿಸಿದ್ದರು. ಪ್ರತಿಭಟನೆಗೆ ಸ್ಪಂದಿಸಿದ ಸರ್ಕಾರ ಶೀಘ್ರ ಬೇಡಿಕೆ ಈಡೇರಿಸುವ ಕುರಿತು ಚರ್ಚಿಸಲಾಗುವುದು ಎಂದು ಭರವಸೆ ನೀಡಿತ್ತು. ಆದರೆ, ಈ ವರೆಗೂ ಜಾರಿಗೊಳಿಸಿಲ್ಲ. ಹೀಗಾಗಿ ಹೋರಾಟ ಆರಂಭಿಸಲಾಗಿದೆ ಎಂದರು.
ಅಹೋರಾತ್ರಿ ಧರಣಿಯಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ, ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ, ಜಿಲ್ಲಾ ಮುಖಂಡರಾದ ಶೋಭಾ ಹೂಗಾರ, ವಿಜಯಲಕ್ಷ್ಮಿ ಆಚಾರ್, ಅನ್ನಪೂರ್ಣ, ಶಿವಮ್ಮ, ಜ್ಯೋತಿ ಲಕ್ಷ್ಮಿ, ಶಬನ ಹುಲಿಗಿ, ದೀಪ, ಲಾಲ್ ಬಿ., ಅಂಜಿನಮ್ಮ, ಶಾರದಾ, ಗೀತಾ, ಸಂಗೀತ, ರೇಖಾ, ಲಲಿತ ಹಿರೇಮಠ, ತಿಪ್ಪಮ್ಮ, ರಜಿಯಾ ಬೇಗಂ, ದ್ರಾಕ್ಷಿಯಿಣಿ, ರಾಧಾ, ಶರಣಮ್ಮ, ಯಲ್ಲಮ್ಮ 800ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.