ಫೆಬ್ರವರಿ 13ರಿಂದ ಆಶಾ ಕಾರ್ಯಕರ್ತೆಯರಿಂದ ಹೋರಾಟ

| Published : Feb 08 2024, 01:31 AM IST

ಸಾರಾಂಶ

ಕಳೆದ ಸುಮಾರು ಎಂಟು ವರ್ಷಗಳಿಂದ ಗೌರವಧನ ಹೆಚ್ಚುವರಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವಾರು ಮನವಿಗಳನ್ನು ಕೊಟ್ಟರೂ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದೇವೆ.

ಕುಷ್ಟಗಿ: ಕೇಂದ್ರ, ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫೆ.13ರಿಂದ ರಾಜ್ಯಮಟ್ಟದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು ಗಡ್ಡಿ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ರಾಜ್ಯ ಮಟ್ಟದ ಹೋರಾಟದ ಭಿತ್ತಿಪತ್ರ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಳೆದ ಸುಮಾರು ಎಂಟು ವರ್ಷಗಳಿಂದ ಗೌರವಧನ ಹೆಚ್ಚುವರಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವಾರು ಮನವಿಗಳನ್ನು ಕೊಟ್ಟರೂ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದೇವೆ. ರಾಜ್ಯ ಮಟ್ಟದ ಆಶಾ ಕಾರ್ಯಕರ್ತೆಯರ ವಿಧಾನಸೌಧ ಚಲೋ ಹೋರಾಟದಲ್ಲಿ ನಮ್ಮ ಜಿಲ್ಲೆಯ ಎಲ್ಲ ಅಶಾ ಕಾರ್ಯಕರ್ತೆಯರು ಭಾಗವಹಿಸಬೇಕು ಎಂದು ಹೇಳಿದರು.ಸಮರ್ಪಕವಾಗಿ ಪ್ರೋತ್ಸಾಹಧನ ಬಾರದ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರು ಕಷ್ಟ ಅನುಭವಿಸುತ್ತಿದ್ದಾರೆ. ನಿರಂತರವಾಗಿ ದುಡಿಯುತ್ತಿರುವ ಬಡ ಮಹಿಳೆಯರಿಗೆ ಅನ್ಯಾಯವಾಗುತ್ತಲೇ ಇದೆ. ಮಹಿಳಾ ಶೋಷಣೆ ನಿಲ್ಲಬೇಕಿದೆ. ಸದಾ ಸೇವೆಗೂ ಸಿದ್ಧ ಹೋರಾಟಕ್ಕೂ ಸಿದ್ಧ ಎನ್ನುವ ಆಶಾ ಕಾರ್ಯಕರ್ತೆಯರನ್ನು ಅನಿವಾರ್ಯವಾಗಿ ಇಲಾಖೆ ಬೀದಿಗೆ ಕರೆ ತರುತ್ತಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ, ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮಿ ಬಡಿಗೇರ್, ಕಾರ್ಯದರ್ಶಿ ಸರಸ್ವತಿ, ಮುಖಂಡರಾದ ಸಾವಿತ್ರಿ, ಯಮನೂರಬಿ, ಚಂಪಾ, ಶರಣಮ್ಮ, ರತ್ನ, ಗಂಗೂಬಾಯಿ, ದುರಗಮ್ಮ, ಶಂಕ್ರಮ್ಮ, ಬಸಮ್ಮ ಭಾಗವಹಿಸಿದ್ದರು.