ಡೀಸಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

| Published : Mar 20 2025, 01:15 AM IST

ಸಾರಾಂಶ

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿರುವಂತೆ ಆಶಾ ಕಾರ್ಯಕರ್ತೆರಿಗೆ ಪ್ರೋತ್ಸಾಹ ಧನ ಸೇರಿಸಿ ಕನಿಷ್ಠ 10,000 ರು. ಮಾಸಿಕ ಗೌರವಧನ ಜೊತೆಗೆ 1 ಸಾವಿರ ರು. ಹೆಚ್ಚಿನ ಗೌರವಧನವನ್ನು ಕಾರ್ಯಕರ್ತರಿಗೆ ನೀಡುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯ ಸಂಘದ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿರುವಂತೆ ಆಶಾ ಕಾರ್ಯಕರ್ತೆರಿಗೆ ಪ್ರೋತ್ಸಾಹ ಧನ ಸೇರಿಸಿ ಕನಿಷ್ಠ 10,000 ರು. ಮಾಸಿಕ ಗೌರವಧನ ಜೊತೆಗೆ 1 ಸಾವಿರ ರು. ಹೆಚ್ಚಿನ ಗೌರವಧನವನ್ನು ಕಾರ್ಯಕರ್ತರಿಗೆ ನೀಡುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯ ಸಂಘದ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಎಪ್ರಿಲ್ 2019 ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಸೇರಿಸಿ ಕನಿಷ್ಠ 10,000 ರು. ಗಳ ಗೌರವಧನ ನೀಡಬೇಕು. ಅದನ್ನು ಹೊರತುಪಡಿಸಿ ಕಾಂಪೋ ನೆಟ್‌ಗಳು ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಬೇಕು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್ ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹ ಧನ ಬಂದಲ್ಲಿ ಅಂತಹ ಆಶಾ ಕಾರ್ಯಕರ್ತೆಯರಿಗೆ ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ ಹತ್ತು ಸಾವಿರ ಗ್ಯಾರಂಟಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಆಯವ್ಯಯದಲ್ಲಿ ಸುಮಾರು ರಾಜ್ಯದ 2,50,000 ಅಂಗನವಾಡಿ ಬಿಸಿಯೂಟ ಕಾರ್ಯಕರ್ತರಿಗೆ ಒಂದು ಸಾವಿರ ಹೆಚ್ಚಿಸಿದಂತೆ 42,000 ಆಶಾ ಕಾರ್ಯಕರ್ತೆರಿಗೂ ಒಂದು ಸಾವಿರ ಹೆಚ್ಚಿಸಿ ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು. ಕೂಡಲೇ ಆರೋಗ್ಯ ಸಚಿವರ ಸಮ್ಮುಖದಲ್ಲಿ ಇಲಾಖೆಯಿಂದ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ಮಾಡಿ ಇನ್ನುಳಿದ ಬಹುದಿನಗಳ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಆರೋಗ್ಯ ಇಲಾಖೆಯಿಂದ ಒಂದಾದ ಮೇಲೆ ಒಂದರಂತೆ ಆಶಾ ಕಾರ್ಯಕ್ರಮದಲ್ಲಿ ಬದಲಾವಣೆಗಳನ್ನು ಮಾಡುತ್ತಿರುವುದು ಸರಿಯಲ್ಲ. 20 ಆಶಾಗಳಿಗೆ ಒಬ್ಬರಂತೆ ಆಶಾ ಸುಗಮಕಾರರನ್ನು ನೇಮಿಸಿಕೊಂಡು ಕಳೆದ 12 ವರ್ಷಗಳಿಂದ ಇವರಿಗೆ ಕೇವಲ 6000 ನೀಡಿ ಕೆಲಸ ತೆಗೆದುಕೊಂಡಿರುತ್ತಾರೆ .ಏಕಏಕಿ ಆಶಾ ಸುಗಮಗಾರರನ್ನು ಕೆಲಸದಿಂದ ಕೊನೆಗೊಳಿಸಿ ಆದೇಶ ಹೊರಡಿಸಿರುವುದು ಸರಿಯಲ್ಲ. ಅವರಿಗೆ ಗೌರವಧನ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ನಿವೃತ್ತಿ ವಯಸ್ಸನ್ನು 62ಕ್ಕೆ ಮಾಡಿ ವಿವಿಧ ರಾಜ್ಯಗಳಲ್ಲಿರುವಂತೆ ನಿವೃತ್ತಿ ಸೌಕರ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ರಾಜೇಶ್ವರಿ, ಕಾರ್ಯದರ್ಶಿ ಚಂದ್ರಕಲಾ ಪ್ರಮುಖರಾದ ಆಶಾ, ಸುಮಾ, ಸುಮಿತ್ರ, ಗಾಯತ್ರಿ, ರೇಣುಕಾ, ಲತಾ ಮತ್ತಿತರರು ಇದ್ದರು.