ಹೊದ್ದೂರು ಶ್ರೀ ಭಗವತಿ ದೇವಸ್ಥಾನದಲ್ಲಿ ಆಶ್ಲೇಷ ಬಲಿ

| Published : Mar 12 2024, 02:02 AM IST

ಹೊದ್ದೂರು ಶ್ರೀ ಭಗವತಿ ದೇವಸ್ಥಾನದಲ್ಲಿ ಆಶ್ಲೇಷ ಬಲಿ
Share this Article
  • FB
  • TW
  • Linkdin
  • Email

ಸಾರಾಂಶ

ಭಗವತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಧಿವಿಧಾನ ಆರಂಭಗೊಂಡಿದೆ. ಈ ಹಿನ್ನೆಲೆ ಪೂಜೆಗಳು ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಮೀಪದ ಹೊದ್ದೂರು ಗ್ರಾಮದಲ್ಲಿ ಪುನರ್ ನಿರ್ಮಾಣಗೊಂಡ ಭಗವತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಶುಕ್ರವಾರ ಆರಂಭಗೊಂಡಿದ್ದು ಭಾನುವಾರ ರಾತ್ರಿ ದೇವಾಲಯದಲ್ಲಿ ಆಶ್ಲೇಷ ಬಲಿ ಜರುಗಿತು.

ದೇವಾಲಯ 1.5 ಕೋಟಿ ರು. ವೆಚ್ಚದಲ್ಲಿ ದೇವಾಲಯ ಪುನರ್ ನಿರ್ಮಾಣಗೊಂಡಿದ್ದು ವಾಸ್ತುಪೂಜೆ, ಕಳಸ ಪೂಜೆ, ವಾಸ್ತು ಬಲಿ ಅಂಕುರ ಆರೋಹಣ, ವಿಗ್ರಹ ಪರಿಗ್ರಹ ದೀಪಾರಾಧನೆ ನಡೆಯಿತು. ಭಾನುವಾರ ಸಂಜೆ ದೀಪಾರಾಧನೆ, ಅಂಕುರ ಪೂಜೆ, ತ್ರಿಕಾಲ ಪೂಜೆ ನಡೆಯಿತು. ಸೋಮವಾರ ಬೆಳಗ್ಗೆ ಗಣಪತಿ ಹೋಮ, ಸಂಜೆ ಅನುಜ್ಞಾ ಬಲಿ ಹಾಗೂ ಅನುಜ್ಞಾ ಪ್ರಾರ್ಥನೆ ಗ್ರಾಮಸ್ಥರಿಂದ ಜರುಗಿತು.

ಮಂಗಳವಾರ ಸಂಜೆ 4 ಗಂಟೆಗೆ ಜಲೋದ್ಧಾರ ಬಿಂಬಶುದ್ಧಿ ಸೇರಿದಂತೆ ವಿವಿಧ ವೈದಿಕ ಕಾರ್ಯಕ್ರಮಗಳು ಜರುಗಲಿವೆ. ಬುಧವಾರ ಬೆಳಗ್ಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ, ಬ್ರಹ್ಮ ಕಳಸ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಿ ಗುರುವಾರ ಸಂಜೆ ಮೂರು ಗಂಟೆಗೆ ದೇವರ ನೃತ್ಯಬಲಿ ಜರುಗಲಿದೆ.

ಬ್ರಹ್ಮ ಶ್ರೀ ಕೆ.ಯು ಪದ್ಮನಾಭ ತಂತ್ರಿಗಳು ಮತ್ತು ಬಳಗ , ದೇವಾಲಯದ ಮುಖ್ಯ ಅರ್ಚಕ ಶ್ರೀಕಾಂತ್, ದೇವಸ್ಥಾನದ ತಕ್ಕ ಮುಖ್ಯಸ್ಥರು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚೌರಿರ ಕೆ. ಮೇದಪ್ಪ, ದೇವತಕ್ಕ ನೆರವಂಡ ಸಂಜಯ್ ಪೂಣಚ್ಚ, ಸಮಿತಿ ಸದಸ್ಯ ಚೌರಿರ ಉದಯ ಸೇರಿದಂತೆ ಸಮಿತಿ ಸದಸ್ಯರು ಊರಿನ ಮತ್ತು ಪರ ಊರಿನ ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.