ಬಡವರ ಮನೆ ಬಾಗಿಲಿಗೆ ಸರಕಾರ ಹೋಗಬೇಕು. ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡುವುದು ಮುಖ್ಯಮಂತ್ರಿಗಳ ಕನಸು. ಇದಕ್ಕಾಗಿ ಪ್ರಜಾಸೇವೆ ಇಲಾಖೆ ಸ್ಥಾಪಿಸಿ ಅದರ ಮೂಲಕ ಈಗ ಸರಕಾರ ಜನರ ಬಳಿಗೆ ಬರುತ್ತಿದೆ. ಗ್ರಾಮೀಣ ಭಾಗದ ಜನರ ವಿವಿಧ ಅಹವಾಲುಗಳಿಗೆ ಇಲಾಖೆಗಳ ಅಧಿಕಾರಿಗಳ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರು: ಬಡವರ ಮನೆ ಬಾಗಿಲಿಗೆ ಸರಕಾರ ಹೋಗಬೇಕು. ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡುವುದು ಮುಖ್ಯಮಂತ್ರಿಗಳ ಕನಸು. ಇದಕ್ಕಾಗಿ ಪ್ರಜಾಸೇವೆ ಇಲಾಖೆ ಸ್ಥಾಪಿಸಿ ಅದರ ಮೂಲಕ ಈಗ ಸರಕಾರ ಜನರ ಬಳಿಗೆ ಬರುತ್ತಿದೆ. ಗ್ರಾಮೀಣ ಭಾಗದ ಜನರ ವಿವಿಧ ಅಹವಾಲುಗಳಿಗೆ ಇಲಾಖೆಗಳ ಅಧಿಕಾರಿಗಳ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಪುತ್ತೂರು ತಾಲೂಕಿನ ಆರ್ಯಾಪು ಗ್ರಾ.ಪಂ ಸಭಾಂಗಣದಲ್ಲಿ ಶನಿವಾರ ನಡೆದ ಪುತ್ತೂರು ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಹಿಂದೆ ಜನರು ಸರಕಾರಿ ಕಚೇರಿ ಬಳಿ ತಮ್ಮ ಅಹವಾಲುಗಳನ್ನು ಹಿಡಿದು ಬರುತ್ತಿದ್ದರು. ಈಗ ಸರಕಾರವೇ ಜನರ ಬಳಿಗೆ ಬರುತ್ತಿದೆ. ಪ್ರಜಾಸೇವೆಯಲ್ಲಿ ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ಗ್ರಾಮೀಣ ಜನರ ಸಮಸ್ಯೆ, ಅಹವಾಲುಗಳನ್ನು ಸ್ವೀಕರಿಸಿ, ಶೇ.೮೦ರಷ್ಟು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ತಾಲೂಕು ಮಟ್ಟದಲ್ಲಿ ಪರಿಹಾರ ಆಗುವಂತೆ ಸಮಸ್ಯೆಗಳ ಪರಿಹರಿಸಲಾಗುತ್ತಿದೆ. ಹಿಂದೆ ಸಲ್ಲಿಸಿ, ಪರಿಹಾರವಾಗದಿರುವ ಸಮಸ್ಯೆಗಳನ್ನು ಪರಿಶೀಲಿಸಿ, ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಬಿ ಕೂಡಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಂಚ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಆರ್ಯಾಪು ಗ್ರಾ.ಪಂ ಆಡಳಿತಾಧಿಕಾರಿಯಾಗಿರುವ ತಾಲೂಕು ಆರೋಗ್ಯಾಧಿಕಾರಿ ಡಾ.,ದೀಪಕರ್ ರೈ ಇದ್ದರು.

ಆರ್ಯಾಪು ಗ್ರಾ.ಪಂ ಪಿಡಿಓ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ಚಂದ್ರ ನಾಯ್ಕ್ ನಿರೂಪಿಸಿ, ವಂದಿಸಿದರು.

ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರಿಂದ ಒಟ್ಟು ೭ ಅಹವಾಲುಗಳನ್ನು ಸ್ವೀಕರಿಸಿಸಲಾಗಿದೆ.

ಚಿತ್ರ ; ಪ್ರಜಾಸೇವೆ ಆಂದೋಲನದಲ್ಲಿ ಶಾಸಕ ಅಶೋಕ್ ರೈ ಮಾತನಾಡಿದರು.