ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಭಾನುವಾರ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿದವು. ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬುಧವಾರ ಪ್ರಾರಂಭಗೊಂಡ ಹೋಮ ಹವನಗಳು ಮುಂದುವರಿದ ಭಾಗವಾಗಿ ಭಾನುವಾರ ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, ಅಂಕುರ ಪೂಜೆ, ಅನುಜ್ಞಾ ಕಲಶ ಪೂಜೆ, ಕುಂಬೇಶ ಕರ್ಕರಿ ಕಲಸ ಪೂಜೆ, ಆದಿವಾಸ ಹೋಮ, ಪರಿಕಲಶ ಪೂಜೆ, ಬ್ರಹ್ಮಕಲಶ ಪೂಜೆ, ಕಲಶಾದಿವಾಸ, ಮಧ್ಯಾಹ್ನ ಪೂಜೆ, ಅನ್ನ ಸಂತರ್ಪಣೆ ನಡೆಯಿತು. ಆ ಬಳಿಕ ರಾತ್ರಿ ದುರ್ಗಾ ನಮಸ್ಕಾರ ಪೂಜೆ ಜರುಗಿತು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ ಹಾಲಿ ಹಾಗೂ ಮಾಜಿ ಪದಾಧಿಕಾರಿಗಳ ಹಾಗೂ ಸದಸ್ಯರು, ಭಕ್ತ ಜನ ಸಂಘದ ಅಧ್ಯಕ್ಷ ಸುಮನ್ ಸುಬ್ರಮಣಿ ಹಾಲಿ ಹಾಗೂ ಮಾಜಿ ಪದಾಧಿಕಾರಿಗಳ ಹಾಗೂ ಸದಸ್ಯರು ಭಾಗವಹಿಸಿದ್ದರು. ಸೋಮವಾರ ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ, ಎಂಟು ಗಂಟೆಗೆ ರೋಹಿಣಿ ನಕ್ಷತ್ರ ಮಿಥುನ ಲಗ್ನದಲ್ಲಿ ಅಷ್ಟ ಬಂಧ ಲೇಪನ, ಮುಂದುವರಿದು ಪರಿಕಲಶಾಭಿಷೇಕ, ಬ್ರಹ್ಮಕಲಶ ಅಭಿಷೇಕ, 12 ಗಂಟೆಗೆ ಮಧ್ಯಾಹ್ನದ ಮಹಾಪೂಜೆ ಹಾಗೂ ಮಂತ್ರಾಕ್ಷತೆ ಮತ್ತು ಅನ್ನ ಸಂತರ್ಪಣೆ ಜರುಗಲಿದೆ. ಕಳಶ ಪೂಜೆ ಮಾಡಿಸಿದವರು ಕಲಶ ಪೂಜೆಯ ರಶೀದಿಯನ್ನು ತೋರಿಸಿ ಪ್ರಸಾದ ಪಡೆಯಬೇಕು ಎಂದು ವ್ಯವಸ್ಥಾಪನಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಅಷ್ಟಬಂಧ ಬ್ರಹ್ಮಕಲಶೋತ್ಸವ ಇಂದು ಮುಕ್ತಾಯ
ಇಲ್ಲಿಗೆ ಸಮೀಪದ ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಭಾನುವಾರ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಿದವು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.