ಸಾರಾಂಶ
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವೈದ್ಯ ಸಿಬ್ಬಂದಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವೈದ್ಯ ಸಿಬ್ಬಂದಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.ಸರಕಾರಿ ಆಸ್ಪತ್ರೆಯ ಚಿಕ್ಕಮಕ್ಕಳ ತಜ್ಞ ಡಾ.ಯುನಸ್ ಅವರ ಮೇಲೆ ಎಲ್ಲಿಮುನ್ನೋಳಿಯ ವೈಭವ ಯರಗಟ್ಟಿ ಹಾಗೂ ಸಂಗಡಿಗರು ಹಲ್ಲೆ ನಡೆಸಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ವೈದ್ಯರುಗಳು ಕಪ್ಪು ಬಟ್ಟೆ ಧರಿಸಿ ತುರ್ತು ಚಿಕಿತ್ಸೆಯನ್ನು ಹೊರತು ಪಡಿಸಿ ಉಳಿದ ಓಪಿಡಿ ಸೇವೆ ನಿಲ್ಲಿಸಿ
ಪ್ರತಿಭಟನೆ ನಡೆಸಿದರು.ಸರಕಾರಿ ಆಸ್ಪತ್ರೆಯ ವೈದ್ಯರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಅರ್ಪಿಸಿದರು.ತಾಲೂಕು ಆರೋಗ್ಯ ಅಧಿಕಾರಿ ಡಾ.ಉದಯ ಕುಡಚಿ, ಮುಖ್ಯ ವೈದ್ಯಾಧಿಕಾರಿ ಮಹಾಂತೇಶ ನರಸನ್ನವರ, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಅವಿನಾಶ ಹೊಳೆಪ್ಪಗೋಳ, ಜಂಟಿ ಕಾರ್ಯದರ್ಶಿ ಮಹಾಂತೇಶ ನಾಯಿಕ, ವೈದ್ಯರಾದ ಎಮ್ .ಸಿ ವಿಜಾಪುರೆ, ಮಕಾನದಾರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
15 ದಿನಗಳ ಹಿಂದೆ ಆರೋಪಿ ಸಂಬಂಧಿಕರೊಬ್ಬರ ಹೆರಿಗೆ ಆಗಿತ್ತು. ಆದರೆ ಮಗುವಿನ ಹೆಚ್ಚಿನ ಚಿಕ್ಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಅಲ್ಲಿ ಮಗು ಮೃತ ಪಟ್ಟಿದ ಕಾರಣ ವ್ಯೆಧ್ಯರ ನಡುವೆ ಮಾತಿನ ವಾಗ್ವಾದ ನಡೆದಿದ್ದೆ ಎನ್ನಲಾಗಿದೆ.