ಕರ್ತವ್ಯನಿರತರ ಮೇಲೆ ಹಲ್ಲೆ: ಕ್ರಮಕ್ಕೆ ಒತ್ತಾಯ

| Published : Mar 08 2025, 12:30 AM IST

ಸಾರಾಂಶ

ಕನಕಪುರ: ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ಕೊಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಮಂಜುನಾಥ್‌ಗೆ ಮನವಿ ಸಲ್ಲಿಸಿದರು.

ಕನಕಪುರ: ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿರುವ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಅಧಿಕಾರಿಗಳಿಗೆ ರಕ್ಷಣೆ ಕೊಡಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಮಂಜುನಾಥ್‌ಗೆ ಮನವಿ ಸಲ್ಲಿಸಿದರು. ತಾಲೂಕಿನ ಕುರುಬಳ್ಳಿದೊಡ್ಡಿ ಗ್ರಾಮದ ವಾಸಿ ಕೆ.ಟಿ.ಸುಂದರ್, ಹಲಸಿನಮರದದೊಡ್ಡಿಯ ಕಿರಣ್‌, ಗುರುಪ್ರಸಾದ್, ತಿಮ್ಮೇಶ್ ಹಾಗೂ ಪ್ರತಾಪ್ ಹಲಸಿನಮರದೊಡ್ಡಿ ವ್ಯಾಪ್ತಿಯಲ್ಲಿ ಕಾಡಾನೆಗಳ ಗಸ್ತು ಕಾರ್ಯಪಡೆ ವಾಹನವನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆನ್ನಲಾಗಿದೆ. ಅವರನ್ನು ಬಿಡಿಸಲು ಬಂದ ಪೊಲೀಸರ ಮೇಲೂ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿದ್ದು ಸರ್ಕಾರಿ ನೌಕರರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ತಾಲೂಕು ಅಧ್ಯಕ್ಷ ಎಡಿಎಲ್‌ಆರ್ ನಂದೀಶ್ ಮಾತನಾಡಿ, ಸರ್ಕಾರದ ಯಾವುದೇ ಇಲಾಖೆ ಅಧಿಕಾರಿ, ನೌಕರರು, ಸಿಬ್ಬಂದಿ ಮುಕ್ತವಾಗಿ ಕೆಲಸ ಮಾಡಲು ಸಾರ್ವಜನಿಕರು ಸಹಕರಿಸಬೇಕು. ಅದನ್ನು ಬಿಟ್ಟು ಸಾರ್ವಜನಿಕರ ಕೆಲಸಕ್ಕೆಬರುವವವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸುವುದು ಸರಿಯಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ತಾಲೂಕು ಆಡಳಿತ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಸಂಘದ ಕಾರ್ಯದರ್ಶಿ ಪ್ರಸನ್ನ ಕುಮಾರ್, ವಿಭಾಗೀಯ ಉಪಾಧ್ಯಕ್ಷ ಎಚ್,ಬಿ.ಶಿವಲಿಂಗೇಗೌಡ, ತಾಲೂಕು ಘಟಕ ದ ಎಲ್ಲಾ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.ಕೆ ಕೆ ಪಿ ಸುದ್ದಿ 05:

ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಆರೋಪಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಿ ಸೌಕರರ ಸಂಘದ ಪದಾಧಿಕಾರಿಗಳು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

.