ಸಾರಾಂಶ
ರಾಷ್ಟ್ರೀಯ ಹೆದ್ದಾರಿ ೭೫ ಪಾಳ್ಯ ಹೋಬಳಿ ಹೊನ್ನವಳ್ಳಿ ಕೂಡಿಗೆಯಲ್ಲಿ ತಡರಾತ್ರಿ ವಕೀಲರೊಬ್ಬರ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೊನ್ನವಳ್ಳಿ ಕೂಡಿಗೆಯಲ್ಲಿ ಬೈಕ್ ಅಡ್ಡಗಟ್ಟಿ ಕಣ್ಣಿಗೆ ಖಾರಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಗಾಯಾಳು ತಂದೆ ಲಿಂಗರಾಜು ಆಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಲೂರು: ರಾಷ್ಟ್ರೀಯ ಹೆದ್ದಾರಿ ೭೫ ಪಾಳ್ಯ ಹೋಬಳಿ ಹೊನ್ನವಳ್ಳಿ ಕೂಡಿಗೆಯಲ್ಲಿ ತಡರಾತ್ರಿ ವಕೀಲರೊಬ್ಬರ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ವಕೀಲ ದುಶ್ಯಂತ ಕುಮಾರ್ ಸಕಲೇಶಪುರದಿಂದ ತಮ್ಮ ಸ್ವಗ್ರಾಮ ಮಂಜಲಗೂಡು ದಾಖಲೆ ರಾಮೇಶ್ವರ ಗ್ರಾಮಕ್ಕೆ ಬೈಕ್‌ನಲ್ಲಿ ಬರುತ್ತಿರುವಾಗ, ಸುಮಾರು ೩ ಗಂಟೆ ರಾತ್ರಿಯಲ್ಲಿ, ಹೊನ್ನವಳ್ಳಿ ಕೂಡಿಗೆಯಲ್ಲಿ ಬೈಕ್ ಅಡ್ಡಗಟ್ಟಿ ಕಣ್ಣಿಗೆ ಖಾರಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಗಾಯಾಳು ತಂದೆ ಲಿಂಗರಾಜು ಆಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಗಂಗಾಧರ್ ತಿಳಿಸಿದ್ದಾರೆ.