ಸಾರಾಂಶ
ಹೊಸನಗರದಲ್ಲಿ ಭಾನುವಾರ ರಾತ್ರಿ ಚಿಕ್ಕಪೇಟೆಯಲ್ಲಿ ಹೋಟೆಲ್ ಬಂದ್ ಮಾಡಿಕೊಂಡು ಹೋಗುವಾಗ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೊಸನಗರ: ಭಾನುವಾರ ರಾತ್ರಿ ಚಿಕ್ಕಪೇಟೆಯಲ್ಲಿ ಹೋಟೆಲ್ ಬಂದ್ ಮಾಡಿಕೊಂಡು ಹೋಗುವ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆಸಿರುವ ಘಟನೆ ನಡೆದಿದೆ.
ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿತಿನ್‌ಕುಮಾರ ಹಾಗೂ ನವೀನ ಮೇಲೆ ಹಲ್ಲೆ ನಡೆದಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಗಂಗೆ ಬಸವಕಲ್ಯಾಣವರೆಗೆ ಕಾರನ್ನು ಹಿಂಬಾಲಿಸಿ ನಿತಿನ್ ಮತ್ತು ಬೆಂಬಲಿಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.ಕಾಂಗ್ರೆಸ್ ಕಾರ್ಯಕರ್ತರು ಈ ಹಲ್ಲೆಯನ್ನು ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆಸ್ಪತ್ರೆಗೆ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
- - - -1ಎಸ್‌ಎಂಜಿಕೆಪಿ07:ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಭೇಟಿ ನೀಡಿ, ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಿತಿನ್‌ಕುಮಾರ ಹಾಗೂ ನವೀನ ಅವರ ಆರೋಗ್ಯ ವಿಚಾರಿಸಿದರು.