ದಾವಣಗೆರೆಯಲ್ಲಿ ವಿಧಾನ ಪರಿಷತ್ತು ಚುನಾವಣೆ ಸುಸೂತ್ರ

| Published : Jun 04 2024, 12:31 AM IST

ದಾವಣಗೆರೆಯಲ್ಲಿ ವಿಧಾನ ಪರಿಷತ್ತು ಚುನಾವಣೆ ಸುಸೂತ್ರ
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ವಿಧಾನದ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥಿತವಾಗಿ ಮತ ಚಲಾವಣೆಯಾಗಿದೆ. ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶೇ.92.93, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶೇ.87.74 ಹಾಗೂ ಪದವೀಧರರ ಕ್ಷೇತ್ರಕ್ಕೆ ಶೇ.80.95ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ತಿಳಿಸಿದ್ದಾರೆ.

- ಆಗ್ನೇಯ ಶಿಕ್ಷಕರ ಕ್ಷೇತ್ರ ಶೇ.92.93, ನೈಋತ್ಯ- ಶೇ.87.74, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಶೇ.80.95 ಮತದಾನ

- - -

ಕನ್ನಡಪ್ರಭ ವಾರ್ತೆ, ದಾವಣಗೆರೆ ಕರ್ನಾಟಕ ವಿಧಾನದ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥಿತವಾಗಿ ಮತ ಚಲಾವಣೆಯಾಗಿದೆ.

ಜಿಲ್ಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶೇ.92.93, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಶೇ.87.74 ಹಾಗೂ ಪದವೀಧರರ ಕ್ಷೇತ್ರಕ್ಕೆ ಶೇ.80.95ರಷ್ಟು ಮತದಾನವಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ತಿಳಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕು ಸೇರಲಿದ್ದು, ಒಟ್ಟು 7 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. 2795 ಪುರುಷ, 1556 ಮಹಿಳೆ ಸೇರಿ ಒಟ್ಟು 4351 ಮತದಾರರಿಗೆ 4054 ಮತದಾರರಂತೆ ಶೇ.93.17ರಷ್ಟು ಮತದಾನವಾಗಿದೆ. 2608 ಪುರುಷ, 1446 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಹೇಳಿದ್ದಾರೆ.ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲೂಕು ಸೇರಲಿವೆ. ಈ ತಾಲೂಕಗಳಲ್ಲಿ 979 ಒಟ್ಟು ಮತದಾರರಿದ್ದು, 4 ಮತಗಟ್ಟೆಗಳಲ್ಲಿ ಮತದಾನ ನಡೆದಿದ್ದು, 648 ಪುರುಷ, 211 ಮಹಿಳೆಯರು ಮತದಾನ ಮಾಡಿದ್ದು, ಒಟ್ಟು 859 ಮತದಾನ ಮಾಡಿದ್ದು, ಶೇ.87.74ರಷ್ಟು ಮತ ಚಲಾವಣೆಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.ನೈಋತ್ಯ ಪದವೀಧರರ ಕ್ಷೇತ್ರ:

ಅದೇ ರೀತಿ ನೈಋತ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕು ಸೇರಿದ್ದು 4288 ಪುರುಷ, 2270 ಮಹಿಳೆಯರು ಸೇರಿ ಒಟ್ಟು 6558 ಮತದಾರರಲ್ಲಿ 8 ಮತಗಟ್ಟೆಗಳಿಂದ 3545 ಪುರುಷ, 1764 ಮಹಿಳೆಯರು ಸೇರಿ ಒಟ್ಟು 5309 ಮತ ಚಲಾಯಿಸಿದ್ದು, ಶೇ.80.95ರಷ್ಟು ಮತದಾನವಾಗಿದೆ. ಮತ ಎಣಿಕೆಯು ಜೂ.6ರಂದು ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

- - - -3ಕೆಡಿವಿಜಿ16, 17, 18, 19:

ದಾವಣಗೆರೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದರು. -3ಕೆಡಿವಿಜಿ20:

ದಾವಣಗೆರೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಮತಗಟ್ಟೆಗೆ ಭೇಟಿ ನೀಡಿ, ವ್ಯವಸ್ಥೆಗಳ ಪರಿಶೀಲಿಸಿದರು.