ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತ್ಯ, 15ರಿಂದ ಮೌಲ್ಯಮಾಪನ

| Published : Apr 07 2024, 01:49 AM IST

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶನಿವಾರ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಯ ಪರೀಕ್ಷೆಗೆ ಶೇ.98.2ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶನಿವಾರ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ಪತ್ರಿಕೆಯ ಪರೀಕ್ಷೆಗೆ ಶೇ.98.2ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಏ.15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ರಾಜ್ಯದ 15 ಶೈಕ್ಷಣಿಕ ಜಿಲ್ಲೆಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರನ್ನು ಇತರ ಕರ್ತವ್ಯಗಳಿಂದ ಬಿಡುಗಡೆಗೊಳಿಸಿ ಮೌಲ್ಯಮಾಪನ ಕಾರ್ಯಕ್ಕೆ ಕಳುಹಿಸಿಕೊಡಬೇಕು ಎಂದು ಶಾಲೆಗಳ ಮುಖ್ಯ ಶಿಕ್ಷಕರಿಗೆ ಮಂಡಳಿ ಸೂಚನೆ ನೀಡಿದೆ.ಎಸ್ಸೆಸ್ಸೆಲ್ಸಿ ಕೀ ಉತ್ತರ ಪ್ರಕಟ:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿಷಯವಾರು ಕೀ ಉತ್ತರಗಳನ್ನು ಇಲಾಖೆಯ ಜಾಲ ತಾಣದಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಏ.8ರವರೆಗೆ ಆಕ್ಷೇಪಣೆ ಸಲ್ಲಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅವಕಾಶ ಕಲ್ಪಿಸಿದೆ. ವಿಳಾಸ: https://kseab.karnataka.gov.in ಮೂಲಕ ಆಕ್ಷೇಪಣೆ ಸಲ್ಲಿಸಬಹುದು.