ಸಾರಾಂಶ
ಚನ್ನಪಟ್ಟಣ: ನೆಮ್ಮದಿಯ ತಾಣಗಳಾದ ದೇವಾಲಯಗಳನ್ನು ಗ್ರಾಮಸ್ಥರೇ ನಿರ್ಮಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ದೇವಾಲಯದ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಚನ್ನಪಟ್ಟಣ: ನೆಮ್ಮದಿಯ ತಾಣಗಳಾದ ದೇವಾಲಯಗಳನ್ನು ಗ್ರಾಮಸ್ಥರೇ ನಿರ್ಮಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ದೇವಾಲಯದ ಅಭಿವೃದ್ಧಿಗೆ ಅಗತ್ಯ ನೆರವು ನೀಡುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಹರೂರು ಗ್ರಾಮದಲ್ಲಿ ನಿರ್ಮಿಸಿರುವ ಶ್ರೀ ಮಾರಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇವಿಯ ಅನುಗ್ರಹ ಎಲ್ಲರಿಗೂ ದೊರೆಯಲಿ, ಆ ತಾಯಿ ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.ದೇವಾಲಯದ ಪಕ್ಕದಲ್ಲಿ ಭವನ ನಿರ್ಮಿಸಬೇಕು ಎಂದು ಇಲ್ಲಿನ ಗ್ರಾಮಸ್ಥರ ಆಸೆಯಾಗಿದ್ದು, ಅದು ನೆರವೇರಲಿ. ಭವನದ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲಾಗುವುದು. ಅಂತೆಯೇ ದೇವಾಲಯದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಹೇಳಿದರು.
ಇದಕ್ಕೂ ಮೊದಲು ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ ನಿರ್ಮಿಸಿರುವ ಶ್ರೀ ಮಾದೇಶ್ವರ ದೇವಸ್ಥಾನ ಉದ್ಘಾಟನೆ, ಗರಕಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸಂಕಷ್ಟಹರ ಗಣಪತಿ ದೇವಸ್ಥಾನ, ನವಗ್ರಹ ದೇವಸ್ಥಾನ, ನಾಗರದೇವತೆಗಳ ಪ್ರತಿಷ್ಠಾಪನೆ ಹಾಗೂ ಸಮುದಾಯ ಭವನವನ್ನು ಕುಮಾರಸ್ವಾಮಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ, ಬೇವೂರು ಮಠದ ಮೃತ್ಯುಂಜಯ ಸ್ವಾಮೀಜಿ, ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಸಿ.ಜಯಮುತ್ತು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್‌ಕಾಮ್ಸ್ ದೇವರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು, ಮುಖಂಡರಾದ ಗರಕಹಳ್ಳಿ ಕೃಷ್ಣೇಗೌಡ ಮುಂತಾದವರು ಉಪಸ್ಥಿತರಿದ್ದರು.ಪೊಟೋ೧೮ಸಿಪಿಟಿ೧:
ಚನ್ನಪಟ್ಟಣ ತಾಲೂಕಿನ ಹರೂರು ಗ್ರಾಮದ ಶ್ರೀ ಮಾರಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪೂಜಾ ಕೈಂಕಾರ್ಯದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಿದರು.