ಸಮುದ್ರದಲ್ಲಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ನೆರವು: ಲಕ್ಷ್ಮೀ ಹೆಬ್ಬಾಳ್ಕರ್

| Published : Oct 16 2025, 02:01 AM IST

ಸಮುದ್ರದಲ್ಲಿ ಮೃತಪಟ್ಟ ಬಾಲಕರ ಕುಟುಂಬಕ್ಕೆ ನೆರವು: ಲಕ್ಷ್ಮೀ ಹೆಬ್ಬಾಳ್ಕರ್
Share this Article
  • FB
  • TW
  • Linkdin
  • Email

ಸಾರಾಂಶ

ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಬೀಚ್‌ನಲ್ಲಿ ಮಂಗಳವಾರ ಈಜಲು ಹೋದ ಸಂಕೇತ್ (16), ಸೂರಜ್ (15), ಆಶಿಶ್ (14) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ ಬೆನ್ನಲ್ಲೇ ಮಾಹಿತಿ ಸಂಗ್ರಹಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಬೈಂದೂರು ತಾಲೂಕಿನಲ್ಲಿ ಸಮುದ್ರಕ್ಕೆ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಬೀಚ್‌ನಲ್ಲಿ ಮಂಗಳವಾರ ಈಜಲು ಹೋದ ಸಂಕೇತ್ (16), ಸೂರಜ್ (15), ಆಶಿಶ್ (14) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ನಡೆದ ಬೆನ್ನಲ್ಲೇ ಮಾಹಿತಿ ಸಂಗ್ರಹಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ ಎಂದಿರುವ ಸಚಿವರು, ಜಿಲ್ಲೆಯಲ್ಲಿ ಇಂಥ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.