ಸಾರಾಂಶ
, ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಅತ್ಯಂತ ಪ್ರಮುಖವಾದ ಮತ್ತು ಗುರುತರವಾದ ಜವಾಬ್ದಾರಿಯನ್ನು ವಹಿಸುತ್ತಾರೆ.
ಕನ್ನಡಪ್ರಭ ವಾರ್ತೆ ಮೈಸೂರು
ವಿದ್ಯಾರ್ಥಿಗಳ ಜೀವನದಲ್ಲಿ ಪೋಷಕರು ಮುಂದಿನ ಭವಿಷ್ಯಕ್ಕಾಗಿ ಒಂದು ನಿರ್ದಿಷ್ಟವಾದ ಗುರಿಯನ್ನು ನೀಡಿ, ಅದರ ಸಾಧನೆಗಾಗಿ ಸ್ಫೂರ್ತಿಯನ್ನು ತುಂಬಬೇಕು ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಶಾಲಾ ಶಿಕ್ಷಣ ವಿಭಾಗದ ಸಹಾಯಕ ವಿದ್ಯಾಧಿಕಾರಿ ಎನ್. ರೇಣುಕಾಸ್ವಾಮಿ ಸಲಹೆ ನೀಡಿದರು.ನಗರದ ಮೇಟಗಳ್ಳಿಯ ಜೆಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2025- 26ನೇ ಸಾಲಿನ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ ಅವರು, ಶಾಲೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ಅತ್ಯಂತ ಪ್ರಮುಖವಾದ ಮತ್ತು ಗುರುತರವಾದ ಜವಾಬ್ದಾರಿಯನ್ನು ವಹಿಸುತ್ತಾರೆ. ವಿದ್ಯಾರ್ಥಿಗಳು ತಂದೆ- ತಾಯಿಗೆ, ಗುರು ಹಿರಿಯರಿಗೆ ಗೌರವ ನೀಡುವುದರ ಜೊತೆಗೆ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕ ಬಿ. ರಂಗೇಗೌಡ ಮಾತನಾಡಿ, ಪೋಷಕರು ಮಕ್ಕಳಲ್ಲಿ ಶಿಸ್ತು, ಶ್ರದ್ಧೆ, ಅಧ್ಯಯನದಲ್ಲಿ ಆಸಕ್ತಿ ಮೂಡಿಸಲು ಪ್ರಮುಖ ಪಾತ್ರ ವಹಿಸಬೇಕು. ಇಂದಿನ ವಿದ್ಯಾರ್ಥಿಗಳು ಆಧುನಿಕತೆಯ ಆಕರ್ಷಣೆಯ ಭರಾಟೆಯಲ್ಲಿ ಮೊಬೈಲ್, ದೂರದರ್ಶನ ನೋಡುವುದರಲ್ಲಿ ಸಮಯವನ್ನು ವ್ಯರ್ಥ ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಇದನ್ನು ಪೋಷಕರು ತಡೆಗಟ್ಟಬೇಕು ಎಂದು ತಿಳಿಸಿದರು.ಮೊದಲು ಪೋಷಕರು ತಮ್ಮ ಮಕ್ಕಳನ್ನು ಗೌರವದಿಂದ ನಡೆಸಿಕೊಂಡು, ಬುದ್ಧಿವಾದ ಹೇಳಬೇಕು. ಮೊದಲು ಪೋಷಕರು ಮೊಬೈಲ್, ದೂರದರ್ಶನದ ಕಾರ್ಯಕ್ರಮಗಳನ್ನು ಅತಿಯಾಗಿ ನೋಡುವುದನ್ನು ನಿಲ್ಲಿಸಿ, ತಮ್ಮ ಮಕ್ಕಳಿಗೆ ಮಾದರಿ ಆಗಬೇಕು ಎಂದರು.ಇದೇ ವೇಳೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೋಷಕರು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಳೆದ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ವಿಷಯವಾರು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ನಗದು ಬಹುಮಾನಗಳನ್ನು ನೀಡಿದರು. ನಂತರ ಮಕ್ಕಳು ಮತ್ತು ಶಿಕ್ಷಕರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.ಸಂಗೀತ ಶಿಕ್ಷಕಿ ಸುಮಂಗಲಾ ಜಂಗಮಶೆಟ್ಟಿ ತಂಡದವರು ಪ್ರಾರ್ಥಿಸಿದರು. ಮುಖ್ಯೋಪಾಧ್ಯಾಯ ಎನ್.ಪಿ. ಸತೀಶ್ ಸ್ವಾಗತಿಸಿದರು. ಮಾನವಿ ಮತ್ತು ವರ್ಷಿಣಿ ನಿರೂಪಿಸಿದರು. ಮಾನ್ವಿ ವಂದಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))