ಸಾರಾಂಶ
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮೂಲಕ ಕುರಿ ಸಾಕಾಣಿಕೆಗೆ ಉತ್ತೇಜನ ನೀಡುವ ಸಲುವಾಗಿ ಈ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ವಾಸಪ್ಪ ಹೇಳಿದರು.
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಮೂಲಕ ಕುರಿ ಸಾಕಾಣಿಕೆಗೆ ಉತ್ತೇಜನ ನೀಡುವ ಸಲುವಾಗಿ ಈ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ವಾಸಪ್ಪ ಹೇಳಿದರು.ಪಟ್ಟಣದಲ್ಲಿ ಭಾನುವಾರ ದುರ್ಗಿಗುಡಿ ದಕ್ಷಿಣಭಾಗದಲ್ಲಿರುವ ಸಹಕಾರ ಸಂಘದ ಮೂರನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಸಂಘದ ಉಳಿತಾಯ ಬಜೆಟ್ ಮಂಡಿಸಿದ್ದು, ಮುಂದಿನ ದಿನಗಳಲ್ಲಿ ಸಂಘವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೆಚ್ಚು ಸೌಲಭ್ಯಗಳನ್ನು ಕೊಡಲು ಪ್ರಯತ್ನಿಸಲಾಗುವುದು, ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆಯೂ ಮಾಹಿತಿ ಪಡೆದು ಶೇರುದಾರರಿಗೆ ವರ್ಗಾಯಿಸುವ ಕೆಲಸ ಮಾಡಲಾಗುವುದು ಎಂದರು.ಸಂಘದ ಉಪಾಧ್ಯಕ್ಷ ಡಿ.ಹುಲುಗೇಶಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕುರಿ ಸಾಕಾಣಿಕೆದಾರರು ಹೆಚ್ಚು ಸಂಖ್ಯೆಯಲ್ಲಿದ್ದು ಅಂಥವರು ಸಂಘದ ಸದಸ್ಯರಾಗಬೇಕು ಮತ್ತು ಸಂಘದ ಸಂರ್ಪಕವಿಟ್ಟುಕೊಳ್ಳಬೇಕು, ಹಾಗಾದರೆ ಮಾತ್ರ ಸಂಘದಿಂದ ಅನುಕೂಲವಾಗುತ್ತದೆ ಎಂದು ಹೇಳಿದರು.
ಸಂಘದ ಕಾರ್ಯದರ್ಶಿ ಎಚ್.ಕೆ. ಶಿವಲಿಂಗಪ್ಪ ಸ್ವಾಗತಿಸಿದರು. ನಿರ್ದೇಶಕರಾದ ಎಚ್.ಕೆ. ಯಶೋಧ ಪ್ರಾರ್ಥನೆ ಮಾಡಿದರು. ಎ.ಕೆ. ಮಂಜುನಾಥ್ ವಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಆಶಾ, ಎಂ.ಟಿ.ಮಮತಾ, ಎಚ್.ಬೀರಪ್ಪ ಬೇಲಿಮಲ್ಲೂರು, ಎಚ್.ಜಿ. ಬುಡೇನ್ ಭಾಷಾ, ಎಸ್.ಎ.ಸಿದ್ದೇಶ್, ಎಚ್.ಸಿದ್ದಪ್ಪ, ಎಂ.ಸಿ.ಸುಜಾತ, ಎ.ಕೆ.ಮಂಜುನಾಥ್, ಎಸ್.ಅಣ್ಣಪ್ಪ, ಹನುಮಂತಪ್ಪ, ಶಿವಲಿಂಗಪ್ಪ ಇತರರು ಉಪಸ್ಥಿತರಿದ್ದರು.