ಸಾರಾಂಶ
ನಿಗಮ ಮಂಡಳಿಗಳ ಅಧ್ಯಕ್ಷರುಗಳ ನೇಮಕವನ್ನು ಇನ್ನು ಮುಂದೆ ತಡ ಮಾಡುವುದಿಲ್ಲ. ಇದು ಯಾವ ಕ್ಷಣದಲ್ಲಿ ಬೇಕಾದರೂ ಅಧ್ಯಕ್ಷರ ಪಟ್ಟಿ ಬಿಡುಗಡೆ ಆಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ನಿಗಮ-ಮಂಡಳಿ ನೇಮಕ ಪಟ್ಟಿ ಮುಂದೂಡುವ ಸಾಧ್ಯತೆಯಿಲ್ಲ. ಯಾವ ಕ್ಷಣದಲ್ಲಿ ಬೇಕಾದರೂ ಆಯ್ಕೆ ಪಟ್ಟಿ ಪ್ರಕಟ ಆಗಬಹುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರಿಗೆ ‘ಸಂಕ್ರಾಂತಿ ವೇಳೆ ನಿಗಮ-ಮಂಡಳಿ ನೇಮಕ ಆಗುತ್ತದೆ ಎಂದು ಹೇಳಿದ್ದಿರಿ’ ಎಂಬ ಪ್ರಶ್ನೆ ತೂರಿ ಬಂತು. ಅದಕ್ಕೆ ಉತ್ತರಿಸಿದ ಅವರು, ‘ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ’ ಎಂದರು.