ಘಾಟಿ ಸುಬ್ರಹ್ಮಣ್ಯದಲ್ಲಿನಟ ಚಿಕ್ಕಣ್ಣ ವಿಶೇಷ ಪೂಜೆ

| Published : Feb 02 2024, 01:02 AM IST

ಸಾರಾಂಶ

ಚಿತ್ರನಟ ಚಿಕ್ಕಣ್ಣ ನಾಯಕ ನಟನಾಗಿ ಅಭಿನಯಿಸಿರುವ ಮೊದಲ ಚಿತ್ರ ಉಪಾಧ್ಯಕ್ಷ ರಾಜ್ಯಾದ್ಯಂತ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆ ಗುರುವಾರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತಮ್ಮ ಅಭಿನಯದ ಸಿನಿಮಾವನ್ನು ಕನ್ನಡ ಕಲಾಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ.

ದೊಡ್ಡಬಳ್ಳಾಪುರ: ಚಿತ್ರನಟ ಚಿಕ್ಕಣ್ಣ ನಾಯಕ ನಟನಾಗಿ ಅಭಿನಯಿಸಿರುವ ಮೊದಲ ಚಿತ್ರ ಉಪಾಧ್ಯಕ್ಷ ರಾಜ್ಯಾದ್ಯಂತ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆ ಗುರುವಾರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತಮ್ಮ ಅಭಿನಯದ ಸಿನಿಮಾವನ್ನು ಕನ್ನಡ ಕಲಾಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ. ಅವರ ಆಶೀರ್ವಾದಕ್ಕೆ ಚಿರಋಣಿ. ದೇವರ ಅನುಗ್ರಹಕ್ಕಾಗಿ ಪ್ರಾರ್ಥಿಸಿದೆ ಎಂದು ಚಿಕ್ಕಣ್ಣ ತಿಳಿಸಿದರು. ಇದೇ ವೇಳೆ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೂಡ ಜೊತೆಗಿದ್ದರು. ನೆಚ್ಚಿನ ನಟನೊಂದಿಗೆ ಸೆಲ್ಫಿ ಪಡೆಯಲು ಅಭಿಮಾನಿಗಳು ಮುಗಿಬಿದ್ದಿದ್ದರು.