ಮಹಾಜನ ಕಾಲೇಜಿನಲ್ಲಿ ಸಾಂಪ್ರದಾಯಿಕ ಉಡುಗೆ ದಿನಾಚರಣೆ

| Published : Jun 01 2024, 01:45 AM IST

ಸಾರಾಂಶ

ಎಲ್ಲಾ ವಿಭಾಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಪ್ರಾದೇಶಿಕ ವೈಶಿಷ್ಟ್ಯ ಉಡುಗೆ- ತೊಡುಗೆಗಳನ್ನು ಧರಿಸಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಡಾ. ಅಬ್ದುಲ್ ಕಲಾಂ ರಜತ ಮಹೋತ್ಸವ ಸಭಾಂಗಣದಲ್ಲಿ ಸಾಂಪ್ರದಾಯಿಕ ಉಡುಗೆ ದಿನ ಮತ್ತು ವಾರ್ಷಿಕ ಭೋಜನ ಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಎಲ್ಲಾ ವಿಭಾಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಪ್ರಾದೇಶಿಕ ವೈಶಿಷ್ಟ್ಯ ಉಡುಗೆ- ತೊಡುಗೆಗಳನ್ನು ಧರಿಸಿ ಸಂಭ್ರಮಿಸಿದರು. ಇದೇ ವೇಳೆ ಎಲ್ಲಾ ವಿಭಾಗಗಳ ಅಧ್ಯಾಪಕರು, ಅಧ್ಯಾಪಕೇತರರು ವಿವಿಧ ಸಾಂಪ್ರದಾಯಿಕ ಉಡುಗೆ-ತೊಡುಗೆಗಳಲ್ಲಿ ಹಾಜರಿದ್ದರು.

ಅಂತಿಮ ವರ್ಷದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮಹಾಜನ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ. ಮುರಳೀಧರ ಭಾಗವತ್, ಗೌರವ ಕಾರ್ಯದರ್ಶಿ ಡಾ.ಟಿ. ವಿಜಯಲಕ್ಷ್ಮಿ ಮುರಳೀಧರ್, ಪ್ರಾಂಶುಪಾಲೆ ಡಾ.ಬಿ.ಆರ್. ಜಯಕುಮಾರಿ, ಸಿಇಓ ಹಾಗೂ ಶೈಕ್ಷಣಿಕ ಸಲಹೆಗಾರ ಡಾ.ಎಸ್.ಆರ್. ರಮೇಶ್ ಅವರು ಶುಭ ಹಾರೈಸಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಆರ್. ತಿಮ್ಮೇಗೌಡ ಹಾಗೂ ಅಧ್ಯಾಪಕರು, ಅಧ್ಯಾಪಕೇತರರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.