ಸಾರಾಂಶ
ಗುಂಡ್ಲುಪೇಟೆ: ಆ.9 ರಂದು ಮೈಸೂರಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶಕ್ಕೆ ಗುಂಡ್ಲುಪೇಟೆ ಕ್ಷೇತ್ರದಿಂದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಿ, ಸಮಾವೇಶ ಯಶಸ್ವಿಗೊಳಿಸಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕರೆ ನೀಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆ.9 ರ ಜನಾಂದೋಲನ ಸಮಾವೇಶ ಸಂಬಂಧದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಪ್ರತಿ ಗ್ರಾಪಂಗೆ ಎರಡು ಬಸ್ ಬರಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಜಾರಿಗೆ ಬಂದಿವೆ. ಅಲ್ಲದೆ ಮುಖ್ಯಮಂತ್ರಿಗಳ ವಿಶ್ವಾಸ ಕಡಿಮೆ ಮಾಡಲು ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ. ಪಾದಯಾತ್ರೆಗೆ ಸಾರ್ವಜನಿಕರ ಬೆಂಬಲವಿಲ್ಲ ಎಂದರು.ಬಿಜೆಪಿಯಲ್ಲೇ ಅಪಸ್ವರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ ಆದರೆ ಬಿಜೆಪಿ ಶಾಸಕರಾದ ಬಸವರಾಜ ಯತ್ನಾಳ್, ರಮೇಶ್ ಜಾರಕಿಹೊಳಿ, ಲಖನ್ ಜಾರಕಿಹೊಳಿ ದೋಸ್ತಿ ಪಾದಯಾತ್ರೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ನಲ್ಲೆ ಅಪಸ್ವರ ಎದ್ದಿದೆ ಎಂದರು.ಕೈ ಪ್ರಬಲ:ಇತ್ತೀಚಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಲೀಡ್‌ನಲ್ಲಿ ಸುನೀಲ್ ಬೋಸ್ ಗೆಲ್ಲುವ ಮೂಲಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪಿ.ಬಿ.ರಾಜಶೇಖರ್, ಬಿ.ಎಂ.ಮುನಿರಾಜು, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಮಾಜಿ ಸದಸ್ಯರಾದ ಕೆರಹಳ್ಳಿ ನವೀನ್, ಪಿ.ಚನ್ನಪ್ಪ, ಎಪಿಎಂಸಿ ಅಧ್ಯಕ್ಷ ಬಸವರಾಜು, ಪುರಸಭೆ ಸದಸ್ಯ ಎನ್.ಕುಮಾರ್, ಮಧು, ನಿರ್ಮಲ, ಮುಖಂಡರಾದ ಬಿ.ಜಿ.ಶಿವಕುಮಾರ್, ದೇವರಹಳ್ಳಿ ಪ್ರಕಾಶ್ ಸೇರಿದಂತೆ ಹಲವರಿದ್ದರು.