ಬೆಳಗಾವಿ: ಜಮೀನು ಫೋರ್ಜರಿ ಪ್ರಕರಣದ ಎಫ್‌ಐಆರ್‌ನಲ್ಲಿ ಆರೋಪಿಯೊಬ್ಬರ ಹೆಸರನ್ನು ಕೈಬಿಟ್ಟಿರುವುದು ಸೇರಿದಂತೆ ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್ ಠಾಣೆಯ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ: ಜಮೀನು ಫೋರ್ಜರಿ ಪ್ರಕರಣದ ಎಫ್‌ಐಆರ್‌ನಲ್ಲಿ ಆರೋಪಿಯೊಬ್ಬರ ಹೆಸರನ್ನು ಕೈಬಿಟ್ಟಿರುವುದು ಸೇರಿದಂತೆ ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್ ಠಾಣೆಯ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅಥಣಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರಿಮಲ್ಲಪ್ಪ ಉಪ್ಪಾರ ವಿರುದ್ಧ ಜಮೀನು ಫೋರ್ಜರಿ ಪ್ರಕರಣದ ತನಿಖೆ ಮತ್ತು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪ ಕೇಳಿಬಂದಿತ್ತು. ಎಫ್‌ಐಆರ್‌ನಲ್ಲಿ ಆರೋಪಿಯ ಹೆಸರನ್ನು ಕೈಬಿಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅಮಾನತು ಕ್ರಮ ಕೈಗೊಂಡಿದ್ದಾರೆ. ಅಥಣಿ ಠಾಣೆಗೆ ತಾತ್ಕಾಲಿಕವಾಗಿ ಅಂಕಲಿ ಪೊಲೀಸ್ ಠಾಣೆಯ ಪಿಐ ಶಿವಕುಮಾರ ಮುಚ್ಚಂಡಿ ಅವರನ್ನು ನಿಯೋಜಿಸಿ ಎಸ್ಪಿ ಆದೇಶಿಸಿದ್ದಾರೆ.