ಸಾರಾಂಶ
ಕೃಷ್ಣಾ ನದಿಯ ನೀರಿನ ಒಳ ಹರಿವು ಹೆಚ್ಚಿದ್ದು, ಮಂಗಳವಾರ ತಹಸೀಲ್ದಾರ್ ವಾಣಿ ಯು., ಉಪತಹಸೀಲ್ದಾರ್ ಹೊಸಕೇರಿ, ಕಂದಾಯ ನಿರೀಕ್ಷಕ ಎಸ್.ಬಿ. ಮೆಣಸಂಗಿ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದರು.
ಕನ್ನಡಪ್ರಭ ವಾರ್ತೆ ಅಥಣಿ
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿಯ ನೀರಿನ ಒಳ ಹರಿವು ಹೆಚ್ಚಿದ್ದು, ಸದ್ಯಕ್ಕೆ ಪ್ರವಾಹ ಸ್ಥಿತಿ ಇಲ್ಲ. ಮಂಗಳವಾರ ತಹಸೀಲ್ದಾರ್ ವಾಣಿ ಯು., ಉಪತಹಸೀಲ್ದಾರ್ ಹೊಸಕೇರಿ, ಕಂದಾಯ ನಿರೀಕ್ಷಕ ಎಸ್.ಬಿ. ಮೆಣಸಂಗಿ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದರು.ಈ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿ, ಮಹಾರಾಷ್ಟ್ರದಲ್ಲಿ ಅತಿಯಾದ ಮಳೆಯಿಂದ ನದಿ ನೀರಿನ ಮಟ್ಟ ಏರುತಿದ್ದರೂ ಹಿಪ್ಪರಗಿ ಜಲಾಶಯದಿಂದ ಅಷ್ಟೇ ಪ್ರಮಾಣದ ನೀರು ಹೊರಬಿಡುತ್ತಿರುವುದರಿಂದ ಸದ್ಯ ನೆರೆ ಭೀತಿ ಇಲ್ಲ. ಆದರೂ ಸಹ ತಾಲೂಕು ಆಡಳಿತ ಸಂಭಾವ್ಯ ನೆರೆ ಎದುರಿಸಲು ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.