ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಿರಂತರ ಅಭ್ಯಾಸ, ಶಿಸ್ತು ಹಾಗೂ ಪರಿಶ್ರಮದಿಂದ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹಾವೇರಿ ಜಿಲ್ಲಾ ಖೋ ಖೋ ಸಂಸ್ಥೆಯ ಅಧ್ಯಕ್ಷ ಕೆ.ಸಿ.ಇಟ್ಟಿಗುಡಿ ಹೇಳಿದರು.

ಬ್ಯಾಡಗಿ: ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ನಿರಂತರ ಅಭ್ಯಾಸ, ಶಿಸ್ತು ಹಾಗೂ ಪರಿಶ್ರಮದಿಂದ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹಾವೇರಿ ಜಿಲ್ಲಾ ಖೋ ಖೋ ಸಂಸ್ಥೆಯ ಅಧ್ಯಕ್ಷ ಕೆ.ಸಿ.ಇಟ್ಟಿಗುಡಿ ಹೇಳಿದರು.

ಪಟ್ಟಣದ ಎಸ್.ಜೆ.ಜೆ.ಎಂ. ತಾಲೂಕು ಕ್ರೀಡಾಂಗಣದಲ್ಲಿ ಹಾವೇರಿ ಜಿಲ್ಲಾ ಖೋ ಖೋ ಸಂಸ್ಥೆ ವತಿಯಿಂದ ಆಯೋಜಿಸಿದ್ದ 14 ವರ್ಷದೊಳಗಿನ ಬಾಲಕಿಯರ ಖೋ ಖೋ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ನಡೆಯಲಿರುವ 5ನೇ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹಾವೇರಿ ಜಿಲ್ಲಾ ಬಾಲಕಿಯರ ತಂಡ ಭಾಗವಹಿಸುತ್ತಿದ್ದು, ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು. ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ದೊರೆತರೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಕ್ರೀಡಾ ಸಂಸ್ಥೆಗಳು ಮಕ್ಕಳಿಗೆ ನಿರಂತರ ಪ್ರೋತ್ಸಾಹ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಜಿತೇಂದ್ರ ಸುಣಗಾರ, ಸುನಿತಾ ತುಂಬದ, ಎಸ್.ಆರ್. ಬಡ್ಡಿ, ಜಿಲ್ಲಾ ಖಜಾಂಚಿ ಶಿವರಾಜ ಗುಂಡೆ, ಬಸವರಾಜ ಬಸಪ್ಪನವರ, ಹನುಮಂತ ನೆಗಳೂರ ಹಾಗೂ ಮಾಲತೇಶ ಪಾಟೀಲ ಉಪಸ್ಥಿತರಿದ್ದರು.