ಉಡುಪಿಯಲ್ಲಿ ನ.2ರಿಂದ ರಾಜ್ಯ ಅಥ್ಲೆಟಿಕ್ಸ್ ಕೂಟ: ಡಿಸಿ
KannadaprabhaNewsNetwork | Published : Oct 08 2023, 12:03 AM IST
ಉಡುಪಿಯಲ್ಲಿ ನ.2ರಿಂದ ರಾಜ್ಯ ಅಥ್ಲೆಟಿಕ್ಸ್ ಕೂಟ: ಡಿಸಿ
ಸಾರಾಂಶ
ಉಡುಪಿಯಲ್ಲಿ ರಾಜ್ಯಮಟ್ಟದ ಅಥ್ಲೆಟಿಕ್ಸ್
ಕನ್ನಡಪ್ರಭ ವಾರ್ತೆ ಉಡುಪಿ ರಾಜ್ಯಮಟ್ಟದ 14 ವರ್ಷದೊಳಗಿನ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ನ.2ರಿಂದ 4ರ ವರೆಗೆ ನಗರದ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದ್ದಾರೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 3000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟಕ್ಕೆ ಹೆಚ್ಚು ಜನರು ಆಗಮಿಸುತ್ತಿರುವ ಹಿನ್ನೆಲೆ, ಅವರಿಗೆ ಅಗತ್ಯವಿರುವ ಕುಡಿಯುವ ನೀರು, ನೈರ್ಮಲ್ಯದ ವ್ಯವಸ್ಥೆಯನ್ನು ನಗರಸಭೆ ವತಿಯಿಂದ, ತುರ್ತು ಚಿಕಿತ್ಸೆ ವೈದ್ಯಕೀಯ ವ್ಯವಸ್ಥೆಯನ್ನು ಜಿಲ್ಲಾ ಆರೋಗ್ಯ ಇಲಾಖೆಯ ಮೂಲಕ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.