ಇಲ್ಲಿನ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಆಟಿದ ಒಣಸ್ ಗುರೂಜಿನೊಟ್ಟೊಗು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಉದ್ಘಾಟಿಸಿದರು.
ಕಾಪು: ಇಲ್ಲಿನ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದ ವತಿಯಿಂದ ಆಟಿದ ಒಣಸ್ ಗುರೂಜಿನೊಟ್ಟೊಗು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ಸಾಯಿ ಈಶ್ವರ್ ಗುರೂಜಿ ಉದ್ಘಾಟಿಸಿದರು.
ನಂತರ ಮಾತನಾಡಿದ ಗುರೂಜಿ, ಆಟಿಯ ತಿಂಗಳು ನಮ್ಮ ಪೂರ್ವಜರಿಗೆ ಬಹಳ ಕಷ್ಟದ ಸಮಯವಾಗಿತ್ತು, ಈ ಸಂದರ್ಭದಲ್ಲಿ ಅವರೆಲ್ಲರೂ ಕೂಡ ಸೊಪ್ಪು ತರಕಾರಿ ಗೆಡ್ಡೆ ಗೆಣಸುಗಳನ್ನು ತಿಂದು ಜೀವನ ಸಾಗಿಸುತ್ತಿದ್ದರು, ಆದರೆ ಇಂದು ಈ ಪರಿಸ್ಥಿತಿ ಇಲ್ಲ, ನಮ್ಮ ಹಿರಿಯರು ನೀಡಿದ ಅಪೂರ್ವವಾದ ಜೀವನ ಪದ್ಧತಿಯನ್ನು ನಾವೆಲ್ಲರೂ ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ನಗರಸಭೆ ಮಾಜಿ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ದೇಶ ಅಭಿಮಾನ ಎಲ್ಲಕ್ಕಿಂತ ಮಿಗಿಲಾದದ್ದು, ಹಿಂದೂ ಸಂಸ್ಕೃತಿಗೆ ತೊಂದರೆಯಾದಾಗ ನಾವೆಲ್ಲರೂ ಎದ್ದು ನಿಲ್ಲಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗೋರಕ್ಷಾ ಅಭಿಯಾನದ ಜಿಲ್ಲಾ ಸಂಚಾಲಕ ಗಜೇಂದ್ರ ಎಸ್. ಬಿ. ಬೈಂದೂರು, ನಾಗರಾಜ್, ವಿಜಯ್ ಕುಂದರ್, ರಾಮ ಟಿ. ಪೂಜಾರಿ, ಸತೀಶ್ ದೇವಾಡಿಗ, ವಿಘ್ನೇಶ್ ನೀಲಾವರ ಮುಂತಾದವರು ಉಪಸ್ಥಿತರಿದ್ದರು. ಶ್ರೀ ಮಠದ ಟ್ರಸ್ಟಿ ಗೀತಾಂಜಲಿ ಸುವರ್ಣ ವಂದಿಸಿದರು. ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು.