‘ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ: ಶಿವಕುಮಾರ್

| Published : Aug 12 2025, 12:32 AM IST

‘ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ: ಶಿವಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಅಂಬಲಪಾಡಿ ಬಿಲ್ಲವ ಸೇವಾ ಸಂಘ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಆಷಾಢ ಮಾಸದ ಆಚರಣೆಗಳು ಹಾಗೂ ಆಹಾರ ಪದ್ಧತಿಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಗ್ರಾಮೀಣ ಬದುಕಿನ ಭವ್ಯ ಸಂಸ್ಕೃತಿಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹೇಳಿದರು.

ಅವರು ಭಾನುವಾರ ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಜ್ಯೋತಿ ಬೆಳಗಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ ಅಮೋಘ ಸಾಧನೆಗೈದ ಉದಯೋನ್ಮುಖ ಬಾಲ ಪ್ರತಿಭೆ ಶ್ರೀಯಾ ಎಸ್. ಪೂಜಾರಿ ಅಂಬಲಪಾಡಿ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಸಂಘದ ಆಡಳಿತ ಸಮಿತಿಯ ನಿಯೋಜಿತ ಅಧ್ಯಕ್ಷ ಶಿವದಾಸ್ ಪಿ., ಉಪಾಧ್ಯಕ್ಷ ಎ. ಮುದ್ದಣ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಂ. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿಗಳಾದ ಸಂಚಲ ಶಶಿಕಾಂತ್, ಅಶ್ವಿನಿ ಪೂಜಾರಿ ಹಾಗೂ ಅಮ್ಮ ಡ್ರೀಮ್ ಮೆಲೋಡಿಸ್ ತಂಡದ ಸುನಿಲ್ ಕುಮಾರ್, ಅಶ್ವಿನಿ ಸುನಿಲ್ ಸಹಿತ ಸಂಘದ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ ಕಾರ್ಯಕ್ರಮ ನಿರೂಪಿಸಿ, ವಿಜಯ ಕೃಷ್ಣ ವಂದಿಸಿದರು.ಮಹಿಳಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಲೋಲಾಕ್ಷಿ ಸಂಯೋಜನೆಯಲ್ಲಿ ಪುಟಾಣಿಗಳಿಂದ ಆಟಿ ಕಳಂಜ ನೃತ್ಯ ಪ್ರದರ್ಶನ ನಡೆಯಿತು. ಆಟಿ ತಿಂಗಳ ವೈವಿಧ್ಯಮಯ ಖಾಧ್ಯಗಳೊಂದಿಗೆ ಸಾಮೂಹಿಕ ಭೋಜನ ನಡೆಯಿತು.