ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಜಿಲ್ಲಾ ಕಾರ್ಯಾಗಾರ

| Published : Sep 27 2025, 12:02 AM IST

ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಜಿಲ್ಲಾ ಕಾರ್ಯಾಗಾರ
Share this Article
  • FB
  • TW
  • Linkdin
  • Email

ಸಾರಾಂಶ

ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ ಮತ್ತು ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಕಾರ್ಯಾಗಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ ಮತ್ತು ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಕಾರ್ಯಾಗಾರ ನಗರದ ಜಿಲ್ಲಾ ಬಿ.ಜೆ.ಪಿ. ಕಚೇರಿಯಲ್ಲಿ ನಡೆಯಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿ, ಸಂಸದ ಕ್ಯಾ.ಬೃಿಜೇಶ್ ಚೌಟ, ಕಳೆದ 11 ವರ್ಷಗಳಲ್ಲಿ ಭಾರತ ವಿಶ್ವದ ಪ್ರಭಾವಶಾಲಿ ರಾಷ್ಟ್ರಗಳ ಜತೆ ಸರಿಸಮಾನವಾಗಿ ನಿಲ್ಲುವಂತಾಗಲು ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತದ ಸಂಕಲ್ಪದಿಂದ ಸಾಧ್ಯವಾಗಿದೆ. ರಕ್ಷಣಾ ಸಾಮಗ್ರಿಗಳು, ಯುದ್ಧ ವಿಮಾನಗಳು ಪ್ರಸ್ತುತ ಭಾರತದಲ್ಲಿಯೇ ನಿರ್ಮಾಣವಾಗುತ್ತಿವೆ. ದೇಶದ ಆರ್ಥಿಕತೆ ಸಧೃಡವಾಗಲು ಎಲ್ಲರ ಸಹಭಾಗಿತ್ವ ಅಗತ್ಯ. ಆತ್ಮನಿರ್ಭರ ಭಾರತ ಅಭಿಯಾನದಲ್ಲಿ ಸಕ್ರಿಯವಾಗಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಪಂಡಿತ್ ದೀನ್ ದಯಾಳ್ ಅವರು ಏಕಾತ್ಮ ಮಾನವತವಾದ ಸಿದ್ಧಾಂತ ಮೂಲಕ ರಾಷ್ಟ್ರೀಯತೆ, ಸಂಸ್ಕೃತಿ, ಸ್ವದೇಶಿ ಚಿಂತನೆಯ ಸ್ವಾವಲಂಬಿ ಭಾರತ ನಿರ್ಮಾಣದ ಕನಸು ಕಂಡವರು. ಅವರ ಸಿದ್ಧಾಂತದ ಮಾರ್ಗದಲ್ಲಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತದ ಯೋಚನೆ, ಯೋಜನೆ ಮೂಲಕ ಭಾರತವನ್ನು ವಿಶ್ವಗುರು ಆಗುವಲ್ಲಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.ಇದೇ ವೇಳೆ ಪದ್ಮಭೂಷಣ ಪುರಸ್ಕೃತ, ಸಾಹಿತಿ ಪ್ರೊ.ಎಸ್.ಎಲ್. ಭೈರಪ್ಪ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನಪ್ರಾರ್ಥನೆ ಮಾಡಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಭಾಗವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಇದ್ದರು. ಅಭಿಯಾನದ ಜಿಲ್ಲಾ ಸಂಚಾಲಕ ಹರೀಶ್ ಕಂಜಿಪಿಲಿ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಹ ಸಂಚಾಲಕ ಪ್ರಭಾಕರ ಪ್ರಭು ವಂದಿಸಿದರು. ಸಹ ಸಂಚಾಲಕ ಜೀವನ್ ಕುಮಾರ್ ತೊಕ್ಕೊಟ್ಟು ನಿರೂಪಿಸಿದರು.