ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬೆಂದೂರ್‌ವೆಲ್ ಶಾಖೆಯ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಕೆ. ವಿ .ಕೆ. ಸೇವಾ ಸಮಿತಿ ಕಸಿಹಿತ್ಲು, ಜಪ್ಪಿನಮೊಗರು, ಲಯನ್ಸ್ ಕ್ಲಬ್, ಮಂಗಳೂರು, ಪಂಪ್‌ವೆಲ್, ಕಲ್ಪವೃಕ್ಷ ಮತ್ತು ಎನ್. ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ , ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಮಂಗಳ ಕಾಲೇಜು ಮತ್ತು ಮಂಗಳ ಆಸ್ಪತ್ರೆ, ಕದ್ರಿ ಮಂಗಳೂರು ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇದರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಇತ್ತೀಚೆಗೆ ಕೆ. ವಿ. ಕೆ. ಮೈದಾನ, ಕಸಿಹಿತ್ಲು, ಜಪ್ಪಿನಮೊಗರು ಇಲ್ಲಿ ನಡೆಯಿತು.

ಮಂಗಳೂರು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬೆಂದೂರ್‌ವೆಲ್ ಶಾಖೆಯ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಕೆ. ವಿ .ಕೆ. ಸೇವಾ ಸಮಿತಿ ಕಸಿಹಿತ್ಲು, ಜಪ್ಪಿನಮೊಗರು, ಲಯನ್ಸ್ ಕ್ಲಬ್, ಮಂಗಳೂರು, ಪಂಪ್‌ವೆಲ್, ಕಲ್ಪವೃಕ್ಷ ಮತ್ತು ಎನ್. ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ , ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಮಂಗಳ ಕಾಲೇಜು ಮತ್ತು ಮಂಗಳ ಆಸ್ಪತ್ರೆ, ಕದ್ರಿ ಮಂಗಳೂರು ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ, ಮಂಗಳೂರು ಇದರ ನುರಿತ ವೈದ್ಯರ ತಂಡದವರಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ಇತ್ತೀಚೆಗೆ ಕೆ. ವಿ. ಕೆ. ಮೈದಾನ, ಕಸಿಹಿತ್ಲು, ಜಪ್ಪಿನಮೊಗರು ಇಲ್ಲಿ ನಡೆಯಿತು.ಈ ಶಿಬಿರವನ್ನು ಅಸಂಘಟಿತ ಕಾರ್ಮಿಕ ಇಲಾಖೆಯ ಕಾರ್ಮಿಕಾಧಿಕಾರಿ ವಿಲ್ಮ ತಾವ್ರೊ ಉದ್ಘಾಟಿಸಿ ಮಾತನಾಡಿ, ಜನಸಾಮಾನ್ಯರು ಕೇಂದ್ರ ಸರ್ಕಾರದ ಸವಲತ್ತುಗಳ ಹಾಗೂ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಾರ್ವಜನಿಕರ ಹಿತ ದೃಷ್ಟಿಯಿಂದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ನೇತೃತ್ವದಲ್ಲಿ ಸತತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಿರುತ್ತಿರುವುದು ಶ್ಲಾಘನೀಯ. ಕಟ್ಟಡ ಕಾರ್ಮಿಕರಿಗೆ ಹಾಗೂ ಎಲ್ಲ ವಿಧದ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ದೊರೆಯುವ ಸವಲತ್ತು, ವಿಮೆಗಳ ಬಗ್ಗೆ ಮಾಹಿತಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸಿ. ಎಸ್. ಸಿ. ಮಂಗಳೂರು ಇದರ ನೋಡೆಲ್ ಅಧಿಕಾರಿ ಪ್ರಶಾಂತ್, ಲಯನ್ಸ್ ಕ್ಲಬ್ ಮಂಗಳೂರು ಕಲ್ಪವೃಕ್ಷ ಇದರ ಅಧ್ಯಕ್ಷ ಲಯನ್ ಉಮೇಶ್ ಅಧಿಕಾರಿ, ಸಮುದಾಯ ದಂತ ಆರೋಗ್ಯ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಮುಖ್ಯಸ್ಥ ಡಾ.ರೇಖಾ ಪಿ. ಶೆಣೈ, ಮಂಗಳಾ ಆಸ್ಪತ್ರೆ ಮತ್ತು ಕಾಲೇಜು ಕದ್ರಿ ಮಂಗಳೂರು ಇಲ್ಲಿನ ವಿದ್ಯಾರ್ಥಿನಿ ಮಂಜುಳಾ ಮಾತನಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಆತ್ಮಶಕ್ತಿ ಸಹಕಾರಿ ಸಂಘ ಕೇವಲ ಬ್ಯಾಂಕಿಂಗ್ ಕ್ಷೇತ್ರ ಮಾತ್ರವಲ್ಲದೆ, ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಉದ್ದೇಶಕ್ಕಾಗಿ ಜನರ ಆರೋಗ್ಯದ ದೃಷ್ಟಿಯಲ್ಲಿ ಎಲ್ಲ ಕಡೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿದ್ದೇವೆ. ನಮ್ಮ ಆರೋಗ್ಯದ ಬಗ್ಗೆ ಮುಂಜಾಗೃತೆ ವಹಿಸಿದರೆ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಇವತ್ತಿನ ಶಿಬಿರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಎಲ್ಲರೂ ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು. ಆತ್ಮಶಕ್ತಿ ಸಹಕಾರಿ ಸಂಘವು ಸಂಘದ ಸದಸ್ಯರಿಗೆ ಮನೆ ನಿರ್ಮಾಣ, ಬಸ್ಸು ತಂಗುದಾಣ ನಿರ್ಮಾಣ, ಬಡಕುಟುಂಬಗಳಿಗೆ ಆರ್ಥಿಕ ನೆರವು ಹಾಗೂ ಬಡ ವಿದಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾ ಬಂದಿದೆ ಎಂದರು.ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ರಾಮನಾಥ್ ಸನಿಲ್, ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಲಯನ್ಸ್ ಕ್ಲಬ್ ಮಂಗಳೂರು ಕಲ್ಪವೃಕ್ಷ ಇದರ ಸ್ಥಾಪಕಾಧ್ಯಕ್ಷ ಲಯನ್ ರಾಜೇಶ್, ಅಧ್ಯಕ್ಷ ಲಯನ್ ಉಮೇಶ್ ಅಧಿಕಾರಿ, ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ರಾಮ್ ಪ್ರಸಾದ್, ಮಂಗಳಾ ಆಸ್ಪತ್ರೆ ಮತ್ತು ಕಾಲೇಜು ಕದ್ರಿ ಮಂಗಳೂರು ಇದರ ಕಣ್ಣಿನ ತಜ್ಞೆ ಸುಷ್ಮಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜೇಶ್, ಸಮುದಾಯ ದಂತ ಆರೋಗ್ಯ ವಿಭಾಗ, ಯೇನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್ ಕುಮಾರ್, ಮತ್ತಿತರರು ಇದ್ದರು.

ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಉಚಿತ ಔಷಧಿ ಹಾಗೂ ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೆ.ವಿ.ಕೆ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯೆ ವೀಣಾ ಮಂಗಳ ಸ್ವಾಗತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸೌಮ್ಯಲತಾ ವಂದಿಸಿದರು. ಕೆ.ವಿ.ಕೆ ಸೇವಾ ಸಮಿತಿಯ ಕೋಶಾಧಿಕಾರಿ ಸೌರಭ್ ಅಂಚನ್ ನಿರೂಪಿಸಿದರು.

---------------