ಸಾರಾಂಶ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2025ನೇ ಸಾಲಿನ ‘ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ’ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ನೀಡಿ ಗೌರವಿಸಿದರು.
ಮಂಗಳೂರು: ಅಖಿಲ ಭಾರತ ಸಹಕಾರ ಸಪ್ತಾಹ ಪ್ರಯುಕ್ತ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2025ನೇ ಸಾಲಿನ ‘ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ’ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ನೀಡಿ ಗೌರವಿಸಿದರು.ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪರೀದ್, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಎ. ಸುವರ್ಣ, ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ. ಸುರೇಂದ್ರ ಬಾಬು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಅಧ್ಯಕ್ಷ ರವಿರಾಜ್ ಹೆಗ್ಡೆ, ರಾಜ್ಯ ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ. ಕುಮಾರ್, ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯಾ ಕೆ.ಆರ್., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐಕಳಬಾವ ದೇವಿಪ್ರಸಾದ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ನವೀನ್, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಲಿಂಗರಾಜ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್, ನಬಾರ್ಡ್ ಡಿಡಿಎಂ ಸಂಗೀತಾ ಮತ್ತಿತರರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))