ಮಂಗಳೂರು: ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಹಕರಿಗೆ ಅಗತ್ಯ ಸಂದರ್ಭಗಳಲ್ಲಿ ಮನೆ ಬಾಗಿಲಿಗೆ ಸೇವೆ ನೀಡಲಾಗುತ್ತಿದೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಹೇಳಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯಲ್ಲಿ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦ ಹಾಗೂ ೧,೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದುದೆ. ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯವನ್ನು ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು ಎಂದರು.ಸಂಘದ ಗ್ರಾಹಕರಾದ ಪಿ.ಕೆ. ಉಪಾಧ್ಯಾಯ, ಅನಿಲ್ ಕುಮಾರ್, ಬಾಲಚಂದ್ರ ಪಣಂಬೂರು, ಶೋಭ, ಅಬ್ದುಲ್ ಖಾದರ್ ಮತ್ತು ಎಚ್. ಆರ್. ಯದುನಂದಿ ಕಾರ್ಯಕ್ರಮ ಉದ್ಘಾಟಿಸಿದರು.
ಸಂಘದ ನಿರ್ದೇಶಕ ರಮಾನಾಥ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಮತ್ತಿತರರಿದ್ದರು.ಸಂಘದ ಕೃಷ್ಣಾಪುರ ಶಾಖಾ ಸಿಬ್ಬಂದಿ ಅಶ್ವಿನಿ ಸ್ವಾಗತಿಸಿದರು. ಶಾಖಾಧಿಕಾರಿ ಸುಜಾತ ನಿರೂಪಿಸಿದರು.