ಬಾಂಗ್ಲಾದಲ್ಲಿನ ಹಿಂದುಗಳ ಮೇಲಿನ ದೌರ್ಜನ್ಯ ಖಂಡನೀಯ

| Published : Aug 13 2024, 12:50 AM IST

ಸಾರಾಂಶ

ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಚಾಮರಾಜನಗರ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಭುವನೇಶ್ವರಿ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿನೀಯ. ತಕ್ಷಣ ದೌರ್ಜನ್ಯ ನಿಲ್ಲಿಸಬೇಕು. ಅವರ ರಕ್ಷಣೆಗೆ ಮುಂದಾಗಬೇಕು. ಬಾಂಗ್ಲಾದೇಶದ ಅಕ್ರಮ ವಲಸಿಗರು ಭಾರತದಲ್ಲಿ ಲಕ್ಷಾಂತರ ಜನ ಎಲ್ಲಾ ರಾಜ್ಯದಲ್ಲಿ ಇದ್ದಾರೆ. ಇದನ್ನ ಗಂಭೀರವಾಗಿ ಪರಿಗಣಿಸಬೇಕು. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಇದರ ಅನುಭವಗಳು ಆಗಿವೆ. ಸಿಎಎಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಕೇಂದ್ರ ಸರ್ಕಾರ ತಕ್ಷಣ ನೊಂದಿರುವ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಶ್ರೀಕಂಠು, ಕೃಷ್ಣಪ್ಪ, ಮಂಜುನಾಥಗೌಡ, ವಿರಾಟ್ ಶಿವು, ಬಾಲಸುಬ್ರಹ್ಮಣ್ಯಂ, ರಾಜು, ರಾ. ಸತೀಶ್, ಕುಮಾರ್, ಶ್ರೀನಿವಾಸ್ ಮಂಜುನಾಥ್, ಬಂಗಾರು, ವಿಜಯೇಂದ್ರ, ಗುರು ಭಾಗವಹಿಸಿದ್ದರು.