ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಹಿಳಾ ಹೋರಾಟಗಾರ್ತಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಹಿಂದೆ ಕೇಂದ್ರ ಸರ್ಕಾರ ಕುಮ್ಮಕ್ಕಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಹಿಳಾ ಹೋರಾಟಗಾರ್ತಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಹಿಂದೆ ಕೇಂದ್ರ ಸರ್ಕಾರ ಕುಮ್ಮಕ್ಕಿದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತದಾನವು ಪ್ರತಿಯೊಬ್ಬ ಭಾರತೀಯನಿಗೂ ಸಂವಿಧಾನ ನೀಡಿದ ಹಕ್ಕಾಗಿದೆ. ಎಸ್. ಐ. ಆರ್. ಜಾರಿಗೊಳಿಸುವ ಮೂಲಕ ಫಾರ್ಮ್ 6, ಫಾರ್ಮ್ 7 ಮೂಲಕ ಸಂವಿಧಾನ ನೀಡಿದ ಹಕ್ಕನ್ನು ಚುನಾವನಾ ಆಯುಕ್ತರು ಕಸಿದುಕೊಳ್ಳಲು ಪ್ರಯತ್ನಿಸುತ್ತಿರುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಚುನಾವಣಾ ಆಯುಕ್ತರ ಪ್ರಜಾಪ್ರಭುತ್ವ ವಿರೋಧಿ ನೀತಿಯ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ಯುವ ಜನರು, ವಿದ್ಯಾರ್ಥಿನಿಯರು, ಮಹಿಳಾ ಪತ್ರಕರ್ತೆಯರ ಮೇಲೆ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಕುಮ್ಮಕ್ಕಿನಿಂದ ದೆಹಲಿ ಪೊಲೀಸರು ನಡೆಸುತ್ತಿರುವ ದೌರ್ಜನ್ಯವನ್ನು ಎಷ್ಟು ಮಾತ್ರಕ್ಕೂ ಸಹಿಸಲು ಸಾಧ್ಯವಿಲ್ಲ ಎಂದವರು ಹೇಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಮಹಿಳಾ ವಿರೋಧಿ ನೀತಿಗೆ ಯುವ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಭ್ರಷ್ಟ ಚುನಾವಣಾ ಆಯುಕ್ತರನ್ನು ರಕ್ಷಿಸಲು ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ತಮ್ಮ ಹೇಳಿಕೆಯಲ್ಲಿ ಟೀಕಿಸಿದ್ದಾರೆ‌.