ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ: ಪ್ರತಿಭಟನೆ

| Published : Jan 01 2024, 01:15 AM IST

ಸಾರಾಂಶ

ಕುಣಿಗಲ್‌ನಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ; ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಕುಣಿಗಲ್

ಪಟ್ಟಣದ ಗುಜಾರಿ ಮೊಹಲ್ಲಾ ಪ್ರದೇಶದಲ್ಲಿ ಗೋ ಹತ್ಯೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪರಿಣಾಮ ಪ್ರತಿಭಟನೆ ನಡೆಸಿದರು.

ಪಟ್ಟಣದ ಮದ್ದೂರು ರಸ್ತೆಯ ಗುಜಾರಿ ಮೊಹಲ್ಲಾ ಪ್ರದೇಶದಲ್ಲಿ ಅಕ್ರಮವಾಗಿ ಗೋವುಗಳನ್ನು ಒದೆ ಮಾಡುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ಬಜರಂಗದಳದ ಕಾರ್ಯಕರ್ತರಾದ ಗಿರಿ ಶಾನೆ ಗೌಡ ಸೇರಿದಂತೆ ಇತರ ಕಾರ್ಯಕರ್ತರು ಮದ್ದೂರು ರಸ್ತೆಯಲ್ಲಿ ಹೋಗುವ ಸಂದರ್ಭದಲ್ಲಿ ಇನ್ನೊಂದು ಕೋಮಿನ ಐವತ್ತಕ್ಕಿಂತ ಹೆಚ್ಚು ಮಂದಿ ಯುವಕರು ಕಲ್ಲು ಸೇರಿದಂತೆ ಹಲವಾರು ಸ್ಥಳೀಯ ವಸ್ತುಗಳಿಂದ ಆತನ ಮೇಲೆ ಹಲ್ಲೆ ಮಾಡಿದ್ದರು.

ಇದರಿಂದ ಆಕ್ರೋಶಗೊಂಡ ಬಜರಂಗದಳದ ಯುವಕರು ಕುಣಿಗಲ್ ಪಟ್ಟಣದ ಹುಚ್ಚು ಮಾಸ್ತಿ ಗೌಡ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಮುಖಾಂತರ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಜರಂಗದಳದ ಮುಖ್ಯಸ್ಥ ಗಿರೀಶ್, ಇತ್ತೀಚೆಗೆ ನಿರಂತರವಾಗಿ ಇಂದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿದೆ. ಕುಣಿಗಲ್‌ನ ಹಲವಾರು ಸ್ಥಳಗಳಲ್ಲಿ ಗೋ ಹತ್ಯೆ ಮಾಡುತ್ತಿರುವ ಬಗ್ಗೆ ಹಲವಾರು ಬಾರಿ ದೂರು ನೀಡಲಾಗಿದೆ. ಈ ವಿಚಾರವಾಗಿ ಪೊಲೀಸರು ಕ್ರಮ ವಹಿಸಬೇಕೆಂದು ಒತ್ತಾಯಿಸಿದರು. ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ

ಈ ಸಂದರ್ಭದಲ್ಲಿ ಶಾನೇಗೌಡ ಕಿರಣ್ ಕಾರ್ತಿಕ್ ಸೇರಿದಂತೆ ಹಲವಾರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಭಾಗವಹಿಸಿದ್ದರು