ಅಕ್ರಮ ಅಡ್ಡೆಗಳ ಮೇಲೆ ದಾಳಿ: 8 ಸಿಲಿಂಡರ್ ವಶ

| Published : Dec 05 2024, 12:31 AM IST

ಸಾರಾಂಶ

ವಿಜಯಪುರ: ನಗರದ ಇಬ್ರಾಹಿಂ ರೋಜಾ, ಸಾಯಿ ಪಾರ್ಕ್‌, ಬಂಜಾರಾ ಕ್ರಾಸ್‌ ಸೇರಿದಂತೆ ವಿವಿಧೆಡೆ ಅನಧಿಕೃತ ಅಡ್ಡೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು 8 ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಗೃಹೋಪಯೋಗಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ವಾಣಿಜ್ಯೋದ್ಯಮಕ್ಕೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ನಯೀಮ ಅತ್ತಾರ ಹಾಗೂ ಸಿಬ್ಬಂದಿ ಒಟ್ಟು 8 ಗ್ಯಾಸ್‌ ತುಂಬಿದ ಗೃಹೋಪಯೋಗಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯಪುರ: ನಗರದ ಇಬ್ರಾಹಿಂ ರೋಜಾ, ಸಾಯಿ ಪಾರ್ಕ್‌, ಬಂಜಾರಾ ಕ್ರಾಸ್‌ ಸೇರಿದಂತೆ ವಿವಿಧೆಡೆ ಅನಧಿಕೃತ ಅಡ್ಡೆಗಳ ಮೇಲೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು 8 ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಗೃಹೋಪಯೋಗಿ ಸಿಲಿಂಡರ್‌ಗಳನ್ನು ಅಕ್ರಮವಾಗಿ ವಾಣಿಜ್ಯೋದ್ಯಮಕ್ಕೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ದಾಳಿ ಮಾಡಿದ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ನಯೀಮ ಅತ್ತಾರ ಹಾಗೂ ಸಿಬ್ಬಂದಿ ಒಟ್ಟು 8 ಗ್ಯಾಸ್‌ ತುಂಬಿದ ಗೃಹೋಪಯೋಗಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ದ್ರವೀಕೃತ ಪೆಟ್ರೋಲಿಯಂ ಅನಿಲ (ಸರಬರಾಜು ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ಉಲ್ಲಂಘನೆ ಮೇರೆಗೆ ಅಗತ್ಯ ವಸ್ತುಗಳ ಕಾಯ್ದೆ 1955ರ ಸೆಕ್ಷನ್‌-7ರ ಮೇರೆಗೆ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.