ಸಾರಾಂಶ
ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್, ಜನರಲ್ ಸ್ಟೋರ್, ಮೆಡಿಕಲ್ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿ ತಂಡದಿಂದ ದಾಳಿ ನಡೆಸಿ, ಕ್ಲಿನಿಕ್ ಸೀಜ್ ಮಾಡಲಾಗಿದೆ.
ನ್ಯಾಮತಿ: ತಾಲೂಕಿನ ಸವಳಂಗ ಗ್ರಾಮದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್, ಜನರಲ್ ಸ್ಟೋರ್, ಮೆಡಿಕಲ್ ಮೇಲೆ ಜಿಲ್ಲಾ ಆರೋಗ್ಯ ಅಧಿಕಾರಿ ತಂಡದಿಂದ ದಾಳಿ ನಡೆಸಿ, ಕ್ಲಿನಿಕ್ ಸೀಜ್ ಮಾಡಲಾಗಿದೆ.
ವೈದ್ಯಕೀಯ ಪ್ರಮಾಣ ಪತ್ರವಿಲ್ಲದೇ, ಸವಳಂಗದಲ್ಲಿ ಮನೆ ಬಾಡಿಗೆ ಪಡೆದು ಹಲವು ವರ್ಷಗಳಿಂದ ಅನಧಿಕೃತವಾಗಿ ಕ್ಲಿನಿಕ್, ಮೆಡಿಕಲ್ಸ್ ಮತ್ತು ಜನರಲ್ ಸ್ಟೋರ್ ನಡೆಸಲಾಗುತ್ತಿತ್ತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಷಣ್ಮುಖಪ್ಪ ನೇತೃತ್ವದ ತಂಡ ದಾಳಿ ನಡೆಸಿ, ಪರಿಶೀಲನೆ ನಡೆಸಿ, ಅನಧಿಕೃತ ಕ್ಲಿನಿಕ್ ಬಂದ್‌ಗೊಳಿಸಿದೆ.ಶಿವಮೊಗ್ಗ ತಾಲೂಕಿನ ಹೊಳೆ ಬೆನವಳ್ಳಿ ವೀಣಾ ಎಚ್. ಎಂಬುವರು ವೈದ್ಯಕೀಯ ಪ್ರಮಾಣ ಪತ್ರವಿಲ್ಲದೇ ಈ ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದಾರೆ ಎಂಬ ಆರೋಪಗಳ ಮೇರೆಗೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಕ್ಲಿನಿಕ್‌ನಲ್ಲಿ ವೈದ್ಯಕೀಯ ಉಪಕರಣಗಳು ದೊರೆತಿವೆ.
ದಾಳಿ ವೇಳೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರುದ್ರಸ್ವಾಮಿ, ಹೊನ್ನಾಳಿ-ನ್ಯಾಮತಿ ತಾಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್, ಆಸ್ಪತ್ರೆಯ ಹಿರಿಯ ಸಿಬ್ಬಂದಿ ನಿಂಗಪ್ಪ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಇದ್ದರು.- - - ಬಸವರಾಜಪ್ಪ ನಿಧನ ನ್ಯಾಮತಿ: ಪಟ್ಟಣದ ಮಾರಿಗುಡಿ ಬೀದಿಯ ನಿವಾಸಿ ಗಡೇಕಟ್ಟೆ ಬಸವರಾಜಪ್ಪ (73) ಶನಿವಾರ ಮಧ್ಯಾಹ್ನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಹಾಗೂ ಬಂಧುಗಳಿದ್ದಾರೆ. ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.