ನಗರದ ಜಪ್ಪು ವೃತ್ತದ ಸದ್ಭಾವನಾ ವೇದಿಕೆಯ ವತಿಯಿಂದ ಬಿಜೈ ಲಯನ್ಸ್ ಕ್ಲಬ್‌ನ ಸಹಯೋಗದಲ್ಲಿ ಅತ್ತಾವರ ಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಮಂಗಳೂರು: ನಗರದ ಜಪ್ಪು ವೃತ್ತದ ಸದ್ಭಾವನಾ ವೇದಿಕೆಯ ವತಿಯಿಂದ ಬಿಜೈ ಲಯನ್ಸ್ ಕ್ಲಬ್‌ನ ಸಹಯೋಗದಲ್ಲಿ ಅತ್ತಾವರ ಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಬಿಜೈ ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರೀತಿ ಡಿಸೋಜಾ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯದ 80 ವರ್ಷಗಳಲ್ಲಿ ಭಾರತವು ಹಲವಾರು ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ನಮ್ಮ ದೇಶ ಗಡಿಗಳಲ್ಲಿ ಮಾತ್ರ ಭದ್ರವಾಗಿದ್ದರೆ ಸಾಲದು, ದೇಶದ ಒಳಗೂ ಒಗ್ಗಟ್ಟು ಮತ್ತು ಏಕತೆಯ ಶಕ್ತಿಯನ್ನು ಪ್ರದರ್ಶಿಸಬೇಕು ಎಂದರು.ಸದ್ಭಾವನಾ ವೇದಿಕೆಯ ಅಧ್ಯಕ್ಷ ದಿವಾನ್ ಕೇಶವ ಭಟ್ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿ, ನಾವೆಲ್ಲರೂ ಒಂದಾಗಿ, ಜಾತಿ-ಮತ ಭೇದವಿಲ್ಲದ ಸುಂದರ ಹಾಗೂ ಸೌಹಾರ್ದಯುತ ಭಾರತವನ್ನು ನಿರ್ಮಿಸೋಣ ಎಂದರು.
ಕಾರ್ಯಕ್ರಮದಲ್ಲಿ ಸದ್ಭಾವನಾ ವೇದಿಕೆ ಹಾಗೂ ಬಿಜೈ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಮತ್ತು ವಿವಿಧ ಗಣ್ಯರು ಉಪಸ್ಥಿತರಿದ್ದರು.